ಗೋಡೆ ಕುಸಿತ: ಮಹಿಳೆ ಸಾವು
ನೆಲಮಂಗಲ: ಮನೆಯ ಗೋಡೆ ಕುಸಿದ ಪರಿಣಾಮ ಮಹಿಳೆ ಮೃತಪಟ್ಟು ವೃದ್ಧರೊಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಕೂಲಿಪುರ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.ಮೃತರನ್ನು ಗಿರಿಯಮ್ಮ(55) ಎಂದು ಗುರುತಿಸಲಾಗಿದೆ. ಗಾಯಗೊಂಡ ವೃದ್ಧರನ್ನು ಬೈಲಪ್ಪ(65) ಎಂದು ಗುರುತಿಸಲಾಗಿದೆ. ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿರುವ ಮನೆಯ ಪಕ್ಕ, ಹೊಸ ಮನೆ ನಿರ್ಮಾಣಕ್ಕೆ ಪಾಯ ತೋಡಲಾಗಿತ್ತು. ಇವರಿರುವ ಮನೆಯ ಪಕ್ಕ, ಹೊಸ ಮನೆ ನಿರ್ಮಾಣಕ್ಕೆ ಪಾಯ ತೋಡಲಾಗಿತ್ತು. ಕಳೆದ ಎರಡು ದಿನಗಳ ಹಿಂದೆ ಬಿದ್ದ ಧಾರಾಕಾರ ಮಳೆಯಿಂದಾಗಿ ಗುಂಡಿಯಲ್ಲಿ ನೀರು ತುಂಬಿಕೊಂಡಿದ್ದರಿಂದ ಇವರ ಮನೆಯ ಗೋಡೆ ಗುರುವಾರ ರಾತ್ರಿ ಕುಸಿದು ಬಿದ್ದಿದೆ. ಘಟನೆಯಿಂದ ಮನೆಯಲ್ಲಿದ್ದ ಹೆಂಡತಿ ಸಾವನ್ನಪ್ಪಿದರೆ ಗಂಡ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ವಿ. ಶಂಕರ್ ಭೇಟಿ ನೀಡಿ ಕುಟುಂಬಕ್ಕೆ ರು. 1.5 ಲಕ್ಷ ಮತ್ತು ಇಂದಿರಾ ಅವಾಜ್ ಯೋಜನೆಯಡಿ ಮನೆ ನಿರ್ಮಿಸಿಕೊಡುವುದಾಗಿ ಹಾಗೂ ವೃದ್ಧರ ಆಸ್ಪತ್ರೆ ವೆಚ್ಚ ಸರ್ಕಾರ ಭರಿಸುತ್ತದೆ ಎಂದು ತಿಳಿಸಿದರು. ಇ.ಒ.ನಾರಾಯಣಸ್ವಾಮಿ, ತಹಸೀಲ್ದಾರ್ ನರಸಿಂಹಮೂರ್ತಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

