ಸಮಾಜ ಸೇವೆಯೇ ಗುರಿಯಾಗಲಿ
ರಾಮನಗರ: ಪ್ರತಿಯೊಬ್ಬ ವ್ಯಕ್ತಿಯೂ ಸಮಾಜ ಸೇವೆಯಲ್ಲಿ ತೊಡಗಿಕೊಂಡರೆ ಮಾತ್ರ ಸಮಾಜದ ಅಭಿವೃದ್ದಿ ಸಾಧ್ಯ ಎಂದು ಸಂಗೀತ ನಿರ್ದೇಶಕ ಹಂಸಲೇಖ ಅಭಿಪ್ರಾಯಪಟ್ಟರು.
ನಗರದ ಹೊನ್ನಮ್ಮ ಕಲ್ಯಾಣ ಮಂಟಪದಲ್ಲಿ ರೋಟರಿ ಸಂಸ್ಥೆ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸೇವೆ ಎನ್ನುವುದು ಆತ್ಮತೃಪ್ತಿ ನೀಡುತ್ತದೆ. ಸಮಾಜ ಸೇವೆಯಲ್ಲಿ ನಿರತರಾದವರು ಸದಾ ಸಂತೋಷದಿಂದ ಇರುತ್ತಾರೆ ಎಂದು ತಿಳಿಸಿದರು.
ರೋಟರಿ ಸಂಸ್ಥೆಯು ತನ್ನದೇ ಆದ ಪರಿಧಿಯಲ್ಲಿ ಸಾರ್ವಜನಿಕರ ಸೇವೆ ಮಾಡುತ್ತಿದೆ. ಹಣವುಳ್ಳವರು ಮಾತ್ರ ರೋಟರಿ ಸಂಸ್ಥೆಯಲ್ಲಿದ್ದಾರೆ ಎನ್ನುವುದಕ್ಕಿಂತ ಸೇವೆಯನ್ನು ಮೈಗೂಡಿಸಿಕೊಂಡವರು ರೋಟರಿ ಸಂಸ್ಥೆಯಲ್ಲಿದ್ದಾರೆ ಎಂಬುದು ಮುಖ್ಯ ಎಂದು ಹಂಸಲೇಖ ಹೇಳಿದರು.
ರೋಟರಿ ಸಂಸ್ಥೆಯು ತನ್ನ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಿದೆ. ಸಂಸ್ಥೆಯು ಬಡವರ, ದೀನದಲಿತರ ಸೇವೆಯಲ್ಲಿ ತೊಡಗಿದೆ. ಜಿಲ್ಲಾ ಶಾಖೆಯು ಕಳೆದ 42 ವರ್ಷದಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಸದಸ್ಯರು ಯಾವುದೇ ಸ್ವಾರ್ಥವಿಲ್ಲದೆ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ನೂತನ ಅಧ್ಯಕ್ಷ ಸಿ.ರಾಜು ತಿಳಿಸಿದರು. 2014-15ನೇ ಸಾಲಿನಲ್ಲಿ ರೋಟರಿ ಸಂಸ್ಥೆಯು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಜಿಲ್ಲೆಯ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ಉಚಿತವಾಗಿ ನೀಡಿದೆ. ಇದರ ಜತೆಗೆ ಎರಡು ಸಾವಿರ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಗುರಿ ಹೊಂದಲಾಗಿದೆ ಎಂದರು.
ಗ್ರಾಮೀಣ ಜನರಿಗೂ ರೋಟರಿ ಸೇವೆಯನ್ನು ತಲುಪಿಸುವ ಉದ್ದೇಶದಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ, ಜಾನುವಾರು ತಪಾಸಣೆ ಶಿಬಿರ, ರಕ್ತದಾನ ಶಿಬಿರ ಅಲ್ಲದೇ ಈಗಾಗಲೇ ಘೋಷಣೆಯಾಗಿರುವಂತೆ ಪೋಲಿಯೊ ಮುಕ್ತ ಭಾರತ ಅಭಿಯಾನವನ್ನು ಮುಂದುವರಿಸಲು ಪಲ್ಸ್ ಪೋಲಿಯೊ ಜಾಗೃತಿ ಜಾಥಾ ಮತ್ತು ಲಸಿಕಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಜನಸೇವೆಯಲ್ಲಿ ರೋಟರಿ ಸದಾ ಮುಂದು ಎಂದು ತೋರಿಸಿಕೊಡಲಾಗುವುದು ರಾಜು ಹೇಳಿದರು. ನಿರ್ಗಮಿತ ಅಧ್ಯಕ್ಷ ಆರ್.ಜಿ.ಚಂದ್ರಶೇಖರ್ ಮಾತನಾಡಿದರು. ನೂತನ ಅಧ್ಯಕ್ಷ ಸಿ.ರಾಜು ಮತ್ತು ಕಾರ್ಯದರ್ಶಿ ಪಿ.ಉಮೇಶ್ ಅವರಿಗೆ ನಿಕಟಪೂರ್ವ ಜಿಲ್ಲಾ ರಾಜ್ಯಪಾಲ ಕೆ.ಎಸ್.ನಾಗೇಂದ್ರ ಅವರು ಅಧಿಕಾರ ಹಸ್ತಾಂತರಿಸಿದರು. ಅರ್ಕಾವತಿ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು. ವಿಕಲಚೇತನ ವಿದ್ಯಾರ್ಥಿ ರಾಘವೇಂದ್ರ ಹಾಗೂ ಕಳೆದ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

