ಬೆಂಗಳೂರು ಗ್ರಾಮಾಂತರ

ದಂತ ಮಾರಾಟ: ಇಬ್ಬರ ಸರೆ

Published On :

ಕನಕಪುರ: ಇತ್ತೀಚೆಗೆ ಬೆಂಗಳೂರಿನಲ್ಲಿ ಪತ್ತೆಯಾದ ಆನೆದಂತ ಮಾರಾಟ ಪ್ರಕರಣದ ಬೆನ್ನುಹತ್ತಿದ ಸಾತನೂರು ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕನಕಪುರ ತಾಲೂಕಿನ ತಮಿಳುನಾಡು ಗಡಿಯ ಪ್ರದೇಶದಲ್ಲಿ ಇತ್ತೀಚೆಗೆ ಸಿಕ್ಕ ಆನೆಯ ಕಳೇಬರದಿಂದ ಎರಡು ದಂತಗಳನ್ನು ಕದ್ದು ಮಾರಾಟ ಮಾಡಿದ್ದ ಚಿಟ್ಟಿ ಉ. ಮಹದೇವ (24) ಹಾಗೂ ರಾಜು (22) ಅವರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಕನಕಪುರ ತಾಲೂಕಿನ ಕೊಳಗೊಂಡನಹಳ್ಳಿ ಸಮೀಪದ ತಮಿಳುನಾಡು ಗಡಿಗೆ ಸಮೀಪದ ಕೋತಿಹಳ್ಳ ಎಂಬಲ್ಲಿ ಒಂದು ತಿಂಗಳ ಹಿಂದೆ ಸತ್ತುಬಿದ್ದಿದ್ದ ಆನೆಯ ದಂತಗಳನ್ನು ಕದ್ದು ಬೆಂಗಳೂರಿನಲ್ಲಿ ಮಾರಾಟ ಮಾಡಿದ್ದರು. ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಆನೆದಂತ ಮಾರಾಟ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿ ಆನೆ ದಂತಚೋರರ ಮಾಹಿತಿಯನ್ನು ಪಡೆದು ಸಾತನೂರು ಅರಣ್ಯಾಧಿಕಾರಿಗಳಿಗೆ ರವಾನಿಸಿದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎಸಿಎಫ್ ಪುಟ್ಟಸ್ವಾಮಿ, ವಲಯ ಅರಣ್ಯಾಧಿಕಾರಿಗಳಾದ ಭೈರವ್, ಪದ್ಮನಾಭ್, ಕಾವೇರಿ ವನ್ಯಜೀವಿ ವಲಯದ ಆರ್ ಎಫ್ಓ ಸುನೀತಾಬಾಯಿ ಮೊದಲಾದವರು ಪಾಲ್ಗೊಂಡಿದ್ದರು.


ರಸ್ತೆ ಕಾಮಗಾರಿಗೆ ಚಾಲನೆ

ಸೂಲಿಬೆಲೆ: ಇಲ್ಲಿಗೆ ಸಮೀಪದ ಲಕ್ಕೊಂಡಹಳ್ಳಿ ಗ್ರಾಮದಲ್ಲಿ ರು. 5 ಲಕ್ಷ ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕ ಎನ್. ನಾಗರಾಜ್ ಗುದ್ದಲಿ ಪೂಜೆ ನಡೆಸಿದರು.ನಂತರ ಮಾತನಾಡಿದ ಅವರು, ತಾಲೂಕಿನಲ್ಲಿ  ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಹಣವನ್ನು ರಾಜ್ಯ ಸರ್ಕಾರದಿಂದ ಮಂಜೂರು ಮಾಡಿಸಲಾಗುವುದು.ಅಭಿವೃದ್ಧಿ ಕಾಮಗಾರಿಗಳಲ್ಲಿ ರಾಜಕೀಯ ಮಾಡಬಾರದು. ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.ಒಕ್ಕಲಿಗರ ಸಂಘದ ನಿರ್ದೇಶಕ ಪ್ರಸಾದ್ ಮಾತನಾಡಿದರು.ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲ್ಲಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ತಾಪಂ ಸದಸ್ಯ ರಾಮಮೂರ್ತಿ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.