ಸಸಿಗಳ ವಿತರಣೆ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕು ಜಲಾನಯನ ಅಭಿವೃದ್ಧಿ ಇಲಾಖೆ, ಅನುವುಗಾರ ಸಂಸ್ಥೆ, ಮದರ್ ಸಂಸ್ಥೆಯ ಸಹಯೋಗದಲ್ಲಿ ಸಮಗ್ರ ಜಲಾನಯನ ನಿರ್ವಹಣೆ ಯೋಜನೆಯಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಸಿಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಿತು. ಮಳೆಗಾಲದಲ್ಲಿ ರೈತರಿಗೆ ಕೃಷಿ ಅರಣ್ಯೀಕರಣ ಕಾಮಗಾರಿಗಳ ಹಿನ್ನೆಲೆಯಲ್ಲಿ ಹಣಬೆ, ತಿಪ್ಪೂರು, ಕೆಸ್ತೂರು, ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿಗಳ ಹಲವೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ತಿಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷ ವೇಣುಕುಮಾರ್ ಸಸಿಗಳನ್ನು ವಿತರಿಸಿ ಯೋಜನೆಗೆ ಚಾಲನೆ ನೀಡಿದರು. ವಲಯ ಅರಣ್ಯಾಧಿಕಾರಿ ಕೆ. ದೇವರಾಜ್ ಮಾತನಾಡಿ, ರೈತರು ಈ ಯೋಜನೆಯ ಸದುಪಯೋಗ ಪಡೆಯಬೇಕು. ಹಸಿರು ಹೊದಿಕೆ ಹೆಚ್ಚಿಸಲು ಕೃಷಿ ಜಮೀನುಗಳಲ್ಲಿ ಹೆಚ್ಚು ಹೆಚ್ಚು ಅರಣ್ಯದ ಸಸಿಗಳನ್ನು ಬೆಳಸಬೇಕು. ಇದರಿಂದ ರೈತರಿಗೆ ಅನೇಕ ರೀತಿಯ ಉಪಯೋಗಗಳಿವೆ. ಆರ್ಥಿಕ ಸ್ವಾವಲಂಬನೆ ಸಾಧಿಸಲು ಯೋಜನೆ ಸಹಕಾರಿ ಎಂದು ವಿವರಿಸಿದರು.ಸಹಾಯಕ ಕೃಷಿ ಅಧಿಕಾರಿ ಕೆ.ಲಿಂಗಯ್ಯ, ತಾಲೂಕು ಜಲಾನಯದ ಅಭಿವೃದ್ಧಿ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ಶ್ರೀಧರ್, ಪ್ರಭಾಕರ್, ಗಂಗರಾಜ್, ಮದರ್ ಸಂಸ್ಥೆಯ ಸಿಬ್ಬಂದಿ ಭಾಗವಹಿಸಿದ್ದರು.
ಮಾರಕಾಸ್ತ್ರಗಳಿಂದ ತಂದೆ-ಮಗನ ಮೇಲೆ ಹಲ್ಲೆ
ದೊಡ್ಡಬಳ್ಳಾಪುರ: ತಂದೆ ಮತ್ತು ಮಗನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ತಾಲೂಕಿನ ದಾಸಗೊಂಡನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ರಾತ್ರಿ 8 ಗಂಟೆ ವೇಳೆಯಲ್ಲಿ ಮನೆಯ ಮುಂದೆ ಕುಳಿತಿದ್ದ ಮುನಿಶಾಮಪ್ಪ (50) ಮತ್ತು ಆತನ ಮಗ ಪುನೀತ್ (19) ಎಂಬುವವರ ಮೇಲೆ ರಬ್ಬನಹಳ್ಳಿ ಗ್ರಾಮದ ಕುಮಾರ್ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.ಮಾರಕಾಸ್ತ್ರಗಳಿಂದ ತಲೆ ಮತ್ತು ಕೈಗೆ ಥಳಿಸಿ ಆತ ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಹಲ್ಲೆಗೊಳಗಾದ ತಂದೆ-ಮಗನನ್ನು ಬೆಂಗಳೂರಿನ ಬಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಪರಿಹಾರ ಧನದ ಚೆಕ್ ವಿತರಣೆ: ನೆಲಮಂಗಲ ತಾಲೂಕಿನ ಕೂಲಿಪುರ ಗ್ರಾಮದಲ್ಲಿ ಮನೆಯ ಗೋಡೆ ಕುಸಿದ ಪರಿಣಾಮ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಬೈಲಪ್ಪ ಅವರಿಗೆ ಪ್ರಕೃತಿ ವಿಕೋಪದ ಕುಟುಂಬಕ್ಕೆ 1.5ಲಕ್ಷ ರು.ಗಳ ಮೊತ್ತದ ಪರಿಹಾರ ಧನದ ಚೆಕ್ಕನ್ನು ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ವಿತರಿಸಿದರು. ತಹಶೀಲ್ದಾರ್ ನರಸಿಂಹಮೂತಿ, ಗ್ರಾ.ಪಂ.ಸದಸ್ಯ ರವಿ, ಗ್ರಾಮ ಲೆಕ್ಕಾಧಿಕಾರಿ ಸುಧೀಪ್, ಮುಖಂಡ ಅಂಜನಮೂರ್ತಿ, ರಾಜಣ್ಣ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

