ಬೆಂಗಳೂರು ರಸ್ತೆ ಗುಂಡಿ, ತ್ಯಾಜ್ಯ ಮುಕ್ತವಾಗಿಸಲು ಕ್ರಮ
ಬೆಂಗಳೂರು: ಬೆಂಗಳೂರಿನ ಎಲ್ಲ ರಸ್ತೆಗಳನ್ನು ಗುಂಡಿಮುಕ್ತ, ಗುಣಮಟ್ಟವಾಗಿ ರೂಪಿಸುವ ಜತೆಗೆ, ತ್ಯಾಜ್ಯಮುಕ್ತ ನಗರಿಯನ್ನಾಗಿ ಮಾಡಲಾಗುತ್ತದೆ. ಅಂತಾರಾಷ್ಟ್ರೀಯ ಖ್ಯಾತಿ ನಗರವನ್ನಾಗಿ ಮಾಡಲಾಗುತ್ತದೆ ಎಂದು ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಶ್ವಾಸನೆ ನೀಡಿದ್ದಾರೆ.
ನಗರದ ರಸ್ತೆಗಳ ಬಗ್ಗೆ ಸಾಕಷ್ಟು ದೂರು ಹಾಗೂ ಆರೋಪಗಳು ಬಂದಿವೆ. ಹಿಂದಿನ ಸರ್ಕಾರದ ನಿರ್ವಹಿಸಿರುವ ಕಳಪೆ ಕಾಮಗಾರಿಯಿಂದ ರಸ್ತೆಗಳು ಹಾಳಾಗಿವೆ. ಈ ಎಲ್ಲ ಆರೋಪವನ್ನು ನಾವು ಹೊರಬೇಕಾಗಿದೆ. ಆದರೂ ನಗರದಲ್ಲಿ ಗುಣಮಟ್ಟ ರಸ್ತೆಗಳನ್ನು ನಿರ್ಮಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ರಸ್ತೆಗಳು ಶೀಘ್ರವೇ ಗುಂಡಿ ಮುಕ್ತವಾಗುತ್ತವೆ ಎಂಬ ಆಶ್ವಾಸನೆಯನ್ನು ಬೆಂಗಳೂರಿನ ಜನರಿಗೆ ನೀಡುತ್ತೇನೆ ಎಂದು ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ 2ನೇ ಹಂತದ ಅಭಿವೃದ್ಧಿ ಕಾಮಗಾರಿಗಳ ಚಾಲನಾ ಸಮಾರಂಭದಲ್ಲಿ ಗುರುವಾರ ಸಿಎಂ ತಿಳಿಸಿದರು. ಬೆಂಗಳೂರು ಅಭಿವೃದ್ಧಿ ಬಗ್ಗೆ ನಮ್ಮ ಸರ್ಕಾರ ಹೆಚ್ಚಿನ ಒತ್ತು ನೀಡುತ್ತದೆ. ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ಕೈಗೊಳ್ಳಲಾಗುತ್ತದೆ. ಮುಂದಿನ ಐದು ವರ್ಷಗಳಲ್ಲಿ ಬೆಂಗಳೂರನ್ನು ಅಂತಾರಾಷ್ಟ್ರೀಯ ಖ್ಯಾತಿಯ ಅಭಿವೃದ್ಧಿ ನಗರಿಯಾಗಿ ರೂಪಿಸಲಾಗುತ್ತದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

