ಕ್ಯಾಟ್ಫಿಷ್ ಸಾಕಣೆ ಹೊಂಡಕ್ಕೆ ಮಣ್ಣು
ಬೆಂಗಳೂರು: ನಗರದ ಹೊರವಲಯದಲ್ಲಿ ಕ್ಯಾಟ್ಫಿಷ್ ಸಾಕಾಣಿಕೆ ನಡೆಯುತ್ತಿರುವ 650 ಹೊಂಡಗಳಲ್ಲಿ 300 ಹೊಂಡಗಳನ್ನು ಸ್ಥಗಿತಗೊಳಿಸಲಾಗಿದೆ. ಉಳಿದ ಹೊಂಡಗಳನ್ನು ಒಂದು ವಾರದಲ್ಲಿ ತೆರವುಗೊಳಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ. ಕ್ಯಾಟ್ಫಿಶ್ಗಳ ಸಾಕಾಣಿಕೆ ಪ್ರಶ್ನಿಸಿ ಡಿ.ಎಂ. ಮೌಲಾ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ. ಶ್ರೀಧರ್ರಾವ್ ಹಾಗೂ ನ್ಯಾ.ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ನಗರದ ಹೊರವಲಯಗಳಲ್ಲಿ ಕ್ಯಾಟ್ ಫಿಶ್ಗಳ ಸಾಕಾಣಿಕೆಯಿಂದ ಪರಿಸರ ಹಾನಿಯಾಗುತ್ತಿದೆ. ಅವುಗಳಿಗೆ ನೀಡುವ ಆಹಾರಗಳಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹದ್ದು ಮತ್ತಿತರರ ಹಕ್ಕಿಗಳ ಹಾರಾಟ ಹೆಚ್ಚಾಗಿದೆ. ಇದರಿಂದ ಸಮೀಪದಲ್ಲಿರುವ ಜಕ್ಕೂರು ಏರೋಡ್ರಂನ ವಿಮಾನಗಳಿಗೆ ಹಾನಿ ಉಂಟಾಗುತ್ತಿದೆ. ಆದ್ದರಿಂದ ಕ್ಯಾಟ್ ಫಿಶ್ ಸಾಕಾಣಿಕೆಯನ್ನು ನಿಷೇಧಿಸಬೇಕು ಎಂದು ಅರ್ಜಿದಾರರು ಕೋರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

