ಮಹಿಳೆ ಆತ್ಮಹತ್ಯೆ
ಬೆಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು, ಸಜೀವ ದಹನವಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಕೆಯನ್ನು ಪಾರು ಮಾಡಲು ಹೋದ ಪತಿಗೆ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೇಗೂರಿನ ಕೆಂಪಮ್ಮ (33) ಮೃತರು. ಮುನಿಕೃಷ್ಣ ಗಾಯಗೊಂಡವರು. ಶನಿವಾರ ಬೆಳಗ್ಗೆ ದುರಂತ ನಡೆದಿದೆ. ಆಕೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನರ್ಸರಿಯಲ್ಲಿ ಕೆಲಸ ಮಾಡುತ್ತಿದ್ದ ಮುನಿಕೃಷ್ಣ ಮದ್ಯಸೇವಿಸಿ ಜಗಳ ಮಾಡುತ್ತಿದ್ದುದೇ ಘಟನೆಗೆ ಕಾರಣ ಎಂದು ಕೆಂಪಮ್ಮನ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಮಕ್ಕಳಾದ ಮಧುಕುಮಾರ್(13), ವೆಂಕಟಲಕ್ಷ್ಮಿ(10), ಕಾವ್ಯ(6) ಅಜ್ಜಿ ಮನೆಯಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

