ಕುವೆಂಪು ಅಂಚೆ ಚೀಟಿ ಬಿಡುಗಡೆಗೆ ಪ್ರಧಾನಿಗೆ ಪತ್ರ
ಕ.ಪ್ರ.ವಾರ್ತೆ ್ಣ ಬೆಂಗಳೂರು ್ಣ ಮಾ.29
ರಾಷ್ಟ್ರಕವಿ ಕುವೆಂಪು ಅವರ ಅಂಚೆ ಚೀಟಿ ಬಿಡುಗಡೆ ಮಾಡಿ ಅವರಿಗೆ ರಾಷ್ಟ್ರೀಯ ಸ್ಥಾನಮಾನ ದೊರಕಿಸಬೇಕು ಎಂದು ಪ್ರಧಾನಿಯವರಿಗೆ ಮನವಿ ಮಾಡುವುದಾಗಿ ಸಂಸದ ಡಿ.ಬಿ. ಚಂದ್ರೇಗೌಡ ತಿಳಿಸಿದ್ದಾರೆ.
ವಿಶ್ವಮಾನವ ಕುವೆಂಪು ಕಲಾನಿಕೇತನ ಸಂಸ್ಥೆ ಶುಕ್ರವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಕುವೆಂಪು 109 ಸಮಾರಂಭದಲ್ಲಿ ಅವರು ಮಾತನಾಡಿದರು.
ವಿಶ್ವಮಾನವ ಸಂದೇಶ ಸಾರಿದ ಕುವೆಂಪು ಅವರಿಗೆ ರಾಷ್ಟ್ರಮಟ್ಟದಲ್ಲಿ ಸೂಕ್ತ ಸ್ಥಾನಮಾನ ದೊರೆಯದ ಕುರಿತು ಅಸಮಾಧಾನವಿದೆ. ಆದ್ದರಿಂದ ಅವರ ಅಂಚೇ ಚೀಟಿ ಬಿಡುಗಡೆಗೊಳಿಸಿ ಅವರ ಹೆಸರನ್ನು ಶಾಶ್ವತಗೊಳಿಸುವಂತೆ ಪ್ರಧಾನಿಯವರಿಗೆ ಪತ್ರ ಬರೆಯುವುದಾಗಿ ಅವರು ತಿಳಿಸಿದರು.
ಕುವೆಂಪು ಭವನ ನಿರ್ಮಾಣಕ್ಕಾಗಿ ಈಗಾಗಲೇ ಸೂಕ್ತ ಸ್ಥಳದಲ್ಲಿ ನಿವೇಶನ ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ. ಚುನಾವಣೆ ಸಮಯವಾದ್ದರಿಂದ ಈ ಕುರಿತು ಇನ್ನಷ್ಟು ವಿವರಣೆ ನೀಡಲಾಗುತ್ತಿಲ್ಲ ಎಂದು ತಿಳಿಸಿದರು.
ಸಾಹಿತಿ ಡಾ. ಕಮಲಾ ಹಂಪನಾ ಕುವೆಂಪು ಅವರ ಭಾವಚಿತ್ರವಿರುವ ಕೈಗಡಿಯಾರ ಬಿಡುಗಡೆಗೊಳಿಸಿ ಮಾತನಾಡಿ, ಕುವೆಂಪು ಕೆಳವರ್ಗದ ದನಿಯಾಗಿದ್ದರು. ಅವರ ಸಮಗ್ರ ಸಾಹಿತ್ಯದ 11 ಸಂಪುಟಗಳನ್ನು ಕುವೆಂಪು ರಾಷ್ಟ್ರೀಯ ಟ್ರಸ್ಟ್ ವತಿಯಿಂದ ಪ್ರಕಟಿಸಲಾಗುವುದು. ಈಗಾಗಲೇ ಎಂಟು ಸಂಪುಟ ಸಿದ್ಧಗೊಂಡಿದ್ದು, ಮುಂದಿನವಾರದೊಳಗೆ ಮೂರು ಸಂಪುಟಗಳು ಬಿಡುಗಡೆಗೊಳ್ಳಲಿವೆ ಎಂದರು.
ಈ ಸಂದರ್ಭದಲ್ಲಿ ಡಾ. ಶಿವಮೊಗ್ಗ ಸುಬ್ಬಣ್ಣ ಅವರಿಗೆ ಕುವೆಂಪು ಗಾನಕೋಗಿಲೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ, ವಿಶ್ರಾಂತ ಕುಲಪತಿ ಜವರೇಗೌಡ, ಹಿನ್ನೆಲೆ ಗಾಯಕಿ ಬಿ.ಕೆ. ಸುಮಿತ್ರಾ, ಕ್ರೀಡಾ ಪಟು ಎಚ್.ಎನ್. ಗಿರೀಶ್, ಡಾ. ಸುನೀಲ್ ಮಲ್ಲೇಶ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

