ಆಕಸ್ಮಿಕ ಗುಂಡು ಹಾರಿ ಕೆಎಸ್‌ಆರ್‌ಪಿ ಪೇದೆ ಸಾವು
ಬೆಂಗಳೂರು: ತರಬೇತಿ ವೇಳೆ ಆಕ್ಮಸಿಕವಾಗಿ ಗುಂಡು ಹಾರಿ ಕರ್ನಾಟಕ ರಾಜ್ಯ ಮೀಸಲು ಪಡೆ ಪೇದೆಯೊಬ್ಬ ಸಾವನ್ನಪ್ಪಿರುವ ಘಟನೆ ಕಸವನಹಳ್ಳಿ ಕೆಎಸ್‌ಆರ್‌ಪಿ ಮೈದಾನದಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಸತೀಶ್ (27) ಮೃತ ಪೇದೆ. ಶನಿವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಬಂದೂಕು ತರಬೇತಿ ನಡೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಗುಂಡು ಸಿಡಿದಿದೆ. ಆಗ ಬಂದೂಕನ್ನು ಸ್ವಚ್ಚಗೊಳಿಸುವ ಕಾರ್ಯವೂ ನಡೆಯುತ್ತಿತ್ತು ಎನ್ನಲಾಗಿದೆ. ಈ ವೇಳೆ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಎರಡು ಗುಂಡುಗಳು ಸತೀಶನ ದೇಹ ಸೇರಿವೆ. ಆದರೆ ಆಕಸ್ಮಿಕವಾಗಿ ಗುಂಡು ಹಾರಿದೆಯೋ ಅಥವಾ ಸತೀಶ್ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದಾರೋ ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ. ಗುಂಡು ಹಾರಿದ ಬಳಿಕ ಪೇದೆಯನ್ನು ಸಮೀಪದ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ, ಅಷ್ಟೊತ್ತಿಗಾಗಲೇ ಸತೀಶ್ ಮೃತಪಟ್ಟಿದ್ದ ಎಂದು ವೈದ್ಯರು ತಿಳಿಸಿದರು. ಶವಪರೀಕ್ಷೆಯ ಬಳಿಕ ಸತೀಶ್‌ನ ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ಕೊಂಡೊಯ್ಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

