ಬೆಂಗಳೂರು ನಗರ

ಮೊಬೈಲ್ ಟವರ್‌ಗೆ ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆ

Published On :

ಬೆಂಗಳೂರು: ಯುವಕನೊಬ್ಬ ಮೊಬೈಲ್ ಟವರ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ತ್ರಿವೇಣಿ ರಸ್ತೆ ಸಮೀಪದ ಕೊಳಚೆ ಪ್ರದೇಶದ ನಿವಾಸಿ ವೀರಮಣಿ(25) ಆತ್ಮಹತ್ಯೆ ಮಾಡಿಕೊಂಡ ಯುವಕ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರೇಮವೈಫಲ್ಯವೇ ಕಾರಣ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ನಗರದ ಖಾಸಗಿ ಕಂಪನಿಯೊಂದರಲ್ಲಿ ವೀರಮಣಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಆ ಕೆಲಸ ಬಿಟ್ಟು ಬೇರೆ ಕೆಲಸಕ್ಕೆ ಸೇರಿದ್ದರು ಹಾಗೂ ಆಗಾಗ ಕೆಲಸ ಬದಲಿಸುತ್ತಿದ್ದರು. ಇತ್ತೀಚೆಗೆ ಕೂಲಿ ಕೆಲಸ ಮಾಡುತ್ತಿದ್ದರು. ಮೊಬೈಲ್ ಟವರ್‌ನಲ್ಲಿ ಮೃತದೇಹ ಇದ್ದುದನ್ನು ಬೆಳಗ್ಗೆ ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲಿಸಿದಾಗ ಆತನ ಜೇಬಿನಲ್ಲಿದ್ದ ಚೀಟಿಯಿಂದ ವಿಳಾಸ ಪತ್ತೆಯಾಗಿದೆ. ಪೋಷಕರ ಬಳಿ ಕ್ಷಮೆ ಯಾಚಿಸಿರುವ ಆತ, ಅವರನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಕುಟುಂಬದವರಿಗೆ ವಿನಂತಿಸಿದ್ದಾನೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.