ಬೆಂಗಳೂರು ನಗರ

ನೇಮಕ ಅವ್ಯವಹಾರ ಹೈ ನೋಟಿಸ್

Published On :

ಬೆಂಗಳೂರು: ರಾಜೀವ್ ಗಾಂಧಿ ಗ್ರಾಮೀಣ ವಸತಿ ಸಹಕಾರ ನಿಗಮದ ನಾಲ್ವರು ಪ್ರಧಾನ ವ್ಯವಸ್ಥಾಪಕರ ನೇಮಕ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ, ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಭಜಂತ್ರಿ ಮಾದಪ್ಪ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಡಿ.ಎಚ್. ವಘೇಲ ಹಾಗೂ ನ್ಯಾ.ಎಚ್.ಎನ್. ಸತ್ಯನಾರಾಯಣ ಅವರಿದ್ದ ವಿಭಾಗೀಯ ಪೀಠ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ವಿವಾದಾತ್ಮಕ ನೇಮಕದ ಆರೋಪ ಎದುರಿಸುತ್ತಿರುವ ಪ್ರಧಾನ ವ್ಯವಸ್ಥಾಪಕರಿಗೆ ಕೂಡ ನೋಟಿಸ್ ಜಾರಿ ಮಾಡಿದೆ.  ನಿಗಮದ ವ್ಯವಸ್ಥಾಪಕರ ನಿರ್ದೇಶಕರ ಹುದ್ದೆಯನ್ನು ಯಾವುದೇ ಅಧಿಸೂಚನೆ, ಪ್ರವೇಶ ಪರೀಕ್ಷೆ, ಸಂದರ್ಶನಗಳಲ್ಲದೆ ನೇಮಕ ಮಾಡಲಾಗಿದೆ. ಇದರ ಹಿಂದೆ ಪ್ರಭಾವಿ ರಾಜಕೀಯ ವ್ಯಕ್ತಿಗಳ ಕೈವಾಡವಿದೆ. ನಿಗಮದ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾದೇವ್ ಪ್ರಸಾದ್ ಅನ್ನು ಅಚಾನಕ್ಕಾಗಿ ಆಗಿ ಪ್ರಧಾನ ವ್ಯವಸ್ಥಾಪಕರಾಗಿ ನೇಮಕ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.