ಬೆಂಗಳೂರು ನಗರ

ನೇಣಿಗೆ ಶರಣಾದ ಪೊಲೀಸ್ ಪೇದೆ

Published On :

ಬೆಂಗಳೂರು: ರಾಜ್ಯ ಗುಪ್ತಚರ ಇಲಾಖೆ ಮುಖ್ಯ ಪೇದೆ ನಾನಿಯಪ್ಪಗೌಡ (53) ಕುಮಾರಕೃಪಾ ಅತಿಥಿಗೃಹ ವಿಶ್ರಾಂತಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅತಿಥಿಗೃಹದ ಭದ್ರತಾ ಸಿಬ್ಬಂದಿಯಾಗಿ ನಾನಿಯಪ್ಪಗೌಡ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕೋರಮಂಗಲ ಪೊಲೀಸ್ ವಸತಿಗೃಹದಲ್ಲಿ ವಾಸವಿದ್ದರು.
ನಾನಿಯಪ್ಪ ಬುಧವಾರ ಮನೆಗೆ ವಾಪಸಾಗಿರಲಿಲ್ಲ.  ಪತ್ನಿ ಮೊಬೈಲ್ ಫೋನ್‌ಗೆ ಕರೆ ಮಾಡಿದ್ದರು. ಸ್ವೀಕರಿಸದ ಹಿನ್ನೆಲೆಯಲ್ಲಿ ಅವರ ಸಹೋದ್ಯೋಗಿಗಳಿಗೆ ಕರೆ ಮಾಡಿದ್ದಾರೆ. ಸಹೋದ್ಯೋಗಿಗಳು ಹುಡುಕಾಟ ನಡೆಸಿ ಮೊಬೈಲ್‌ಗೆ ಕರೆ ಮಾಡಿದ್ದಾರೆ. ಉತ್ತರಿಸಿದ ಹಿನ್ನೆಲೆಯಲ್ಲಿ ಅತಿಥಿಗೃಹಕ್ಕೆ ಬಂದು ಬಾಗಿಲು ಒಡೆದು  ನೋಡಿದಾಗ ನಾನಿಯಪ್ಪ ನೇಣಿಗೆ ಶರಣಾಗಿರುವುದು ಗೊತ್ತಾಗಿದೆ.
ನಾನಿಯಪ್ಪ ಕೆಲ ವರ್ಷಗಳಿಂದ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿದ್ದರು. ಇದೇ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.