ಹೆಚ್ಚಿನ ಸರಕು-ಸಾಗಣೆ; ಲೈಸೆನ್ಸ್ ಗೆ ಕುತ್ತು
ಬೆಂಗಳೂರು: ಲಾರಿಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಸರಕು-ಸಾಗಣೆ ಮಾಡಿದರೆ ಲೈಸೆನ್ಸ್ಗೆ ಕುತ್ತು ಬೀಳಲಿದೆ.
ಸಾರಿಗೆ ಅಭಿವೃದ್ಧಿ ಮಂಡಳಿ ಬುಧವಾರ ನವದೆಹಲಿಯಲ್ಲಿ ನಡೆಸಿದ 35ನೇ ಸರ್ವ ಸದಸ್ಯರ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿದೆ. ಸಭೆಯಲ್ಲಿ ಎಲ್ಲಾ ರಾಜ್ಯಗಳ ಸಾರಿಗೆ ಸಚಿವರು ಮತ್ತು ಸಂಘ ಸಂಸ್ಥೆಗಳ ಸದಸ್ಯರು ಸಭೆಯಲ್ಲಿ ಭಾಗವಹಿಸಿ ಕೆಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ಈ ವೇಳೆಯಲ್ಲಿ ಮಂಡಳಿಯು ಲಾರಿಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಸರಕು-ಸಾಗಣೆ ಮಾಡಿದರೆ ಆರು ತಿಂಗಳು ವಾಹನ ಪರವಾನಗಿ ರದ್ದು ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದು, ಈ ವಿಷಯದ ಬಗ್ಗೆ ಹೆಚ್ಚಿನ ಚರ್ಚೆ ನಡೆಯಿತು. ಸರ್ಕಾರ ಈ ರೀತಿ ನಿರ್ಧಾರ ತೆಗೆದುಕೊಳ್ಳುವ ಮುನ್ನ ರಾಜ್ಯದ ಎಲ್ಲಾ ಹೆದ್ದಾರಿಗಳಲ್ಲಿ ಮಾಪನ ಕೇಂದ್ರಗಳನ್ನು ಸ್ಥಾಪಿಸಿ ಆನಂತರ ತೀರ್ಮಾನ ತೆಗೆದುಕೊಳ್ಳುವುದು ಸೂಕ್ತ ಎಂದು ರಾಜ್ಯ ಲಾರಿ ಮಾಲೀಕರ ಮತ್ತು ಏಜೆಂಟ್ಸ್ ಸಂಘದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ಮಂಡಳಿಯ ನಿರ್ಧಾರದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

