ಯಳ್ಳೂರು ಪ್ರಕರಣ: ಅರ್ಜಿ ಇತ್ಯರ್ಥ
ಬೆಂಗಳೂರು: ಬೆಳಗಾವಿಯ ಯಳ್ಳೂರಿನಲ್ಲಿ ಎಂಇಎಸ್ನವರು ಅಕ್ರಮವಾಗಿ ನೆಟ್ಟಿದ್ದ ಕಲ್ಲನ್ನು ತೆರವುಗೊಳಿಸಿರುವುದಾಗಿ ಸರ್ಕಾರ ಪ್ರಮಾಣಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿದೆ.
ಬೆಳಗಾವಿಯ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಯಳ್ಳೂರನ್ನು ಎಂಇಎಸ್ನವರು 'ಮಹಾರಾಷ್ಟ್ರ ಯಳ್ಳೂರು' ಎಂದು ಹೆಸರಿಸಿ ಅಕ್ರಮವಾಗಿ ಕಲ್ಲು ನೆಟ್ಟಿದ್ದಾರೆಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗುಂಡಪ್ಪ ಗಡಾದ್ ಎಂಬುವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಹೈಕೋರ್ಟ್ನ ಆದೇಶದ ಮೇರೆಗೆ ಸರ್ಕಾರ ಕಲ್ಲನ್ನು ತೆರವುಗೊಳಿಸಿದ್ದು ಪ್ರಕರಣ ಸದ್ಯ ಬೆಳಗಾವಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ತೆರವಿನ ನಂತರ ಎಂಇಎಸ್ನವರು ಪುಂಡಾಟಿಕೆ ನಡೆಸಿದ್ದು ಮತ್ತೊಮ್ಮೆ ಗಲಭೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಕ್ತ ಆದೇಶ ನೀಡಬೇಕೆಂದು ಅರ್ಜಿದಾರರು ಮನವಿ ಮಾಡಿದ್ದರು. ವಿಚಾರಣೆ ನಡೆಸಿದ ಮುಖ್ಯ ನ್ಯಾ. ಡಿ.ಎಚ್. ವಾಘೇಲಾ ಮತ್ತು ನ್ಯಾ. ಅಶೋಕ್ ಬಿ ಹಿಂಚಿಗೇರಿ ಪೀಠ, ಅರ್ಜಿ ದಾರರ ಮುಖ್ಯ ಉದ್ದೇಶ ಈಡೇರಿದ ಹಿನ್ನೆಲೆಯಲ್ಲಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

