ಭಾರಿ ಮಳೆ; ಇಬ್ಬರು ಬಲಿ
ಬೆಂಗಳೂರು: ರಾಜ್ಯದ ವಿವಿಧೆಡೆ ಸೋಮವಾರ ವರುಣ ಆರ್ಭಟಿಸಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಇಬ್ಬರು ರೈತರು ಬಲಿಯಾಗಿದ್ದಾರೆ.
ಮರೇಬೈಲು ನಿವಾಸಿ ಎಂ.ಡಿ. ರಾಮೇಗೌಡ, ಕಾರ್ಮಕ್ಕಿ ಗ್ರಾಮದ ರುದ್ರಯ್ಯ ಮೃತಪಟ್ಟವರು. ರುದ್ರಯ್ಯ ಶನಿವಾರ ತಮ್ಮ ಗದ್ದೆಯ ಕೆಸರಲ್ಲಿ ಹೂತು ಹೋಗಿದ್ದರು. ಆಸುಪಾಸಿನಲ್ಲಿದ್ದವರು ಅವರನ್ನು ಎತ್ತಿ, ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ. ರಾಮೇಗೌಡ ಭಾನುವಾರ ಸಂಜೆ ಮನೆಗೆ ಮರಳುವಾಗ ಹೇಮಾವತಿ ನದಿಯ ಹಳ್ಳದಲ್ಲಿ ಸಿಲುಕಿ ಮೃತರಾದರು. ಸೋಮವಾರ ಮೃತದೇಹ ಪತ್ತೆಯಾಗಿದೆ.
ಕಳಸ- ಹೊರನಾಡು ರಸ್ತೆ ಮುಳುಗಡೆಯಾಗಿದ್ದು, ಇಲ್ಲಿ ಸಂಚರಿಸುವ ವಾಹನಗಳ ಮೇಲೆ ನಿಗಾ ಇಡಲು ಪ್ರಕೃತಿ ವಿಕೋಪ ನಿರ್ವಹಣಾ ತಂಡಕ್ಕೆ ಸೂಚಿಸಲಾಗಿದೆ. ಮೂಡಿಗೆರೆ ಹಾಗೂ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಶಾಲಾ, ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.ಕೃಷ್ಣೆ ತೀರದಲ್ಲಿ ಪ್ರವಾಹ ಭೀತಿಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಹರಿಯುತ್ತಿರುವ ಕೃಷ್ಣಾ ನದಿ ತೀರದ ಬಹುತೇಕ ಗ್ರಾಮಗಳಲ್ಲಿ ನೀರು ನುಗ್ಗುವ ಭೀತಿ ಎದುರಾಗಿದೆ. ಮಹಾರಾಷ್ಟ್ರದ ಧೂದಗಂಗಾ, ವೇದಗಂಗಾ, ಪಂಚಗಂಗಾ ಹಾಗೂ ಕೃಷ್ಣಾ ಕಣಿವೆ ಪ್ರದೇಶದಲ್ಲಿ ಮಳೆ ಆರ್ಭಟ ಹೆಚ್ಚಾಗಿದ್ದರಿಂದ ಕೃಷ್ಣೆ ಮೈದುಂಬಿ ಹರಿಯುತ್ತಿದ್ದಾಳೆ.
ಆಲಮಟ್ಟಿ ಜಲಾಶಯದಲ್ಲಿ 512.45 ಮೀಟರ್ (44.09 ಟಿಎಂಸಿ) ನೀರು ಸಂಗ್ರಹವಿದ್ದು, 78450 ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.ಕೆಆರ್ಎಸ್ ಜಲಾಶಯಕ್ಕೆ 100 ಅಡಿ ನೀರು: ಕೆಆರ್ಎಸ್ ಜಾಲಾಶಯ 100 ಅಡಿ ತುಂಬಿದ್ದು, ಅಣೆಕಟ್ಟೆ ಭರ್ತಿಯಾಗಲು ಇನ್ನೂ 24 ಅಡಿ ಬಾಕಿ ಇದೆ. ಕಳೆದೊಂದು ವಾರದಿಂದ ತಮಿಳುನಾಡಿಗೆ ಹರಿಸುತ್ತಿದ್ದ ನೀರನ್ನೂ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಕೊಡಗು ಹಾಗೂ ಮಲೆನಾಡಿನ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿರುವ ಹಿನ್ನೆಲೆಯಲ್ಲಿ ಮುಂದಿನ 15 ದಿನಗಳೊಳಗೆ ಜಲಾಶಯ ಪೂರ್ತಿ ಭರ್ತಿಯಾಗುವ ನಿರೀಕ್ಷೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

