ಕುದ್ರೆಮನಿ, ಬನ್ನಿಬಾಗಿ ಕಾಲರಾ ಪೀಡಿತ ಪ್ರದೇಶ: ಘೋಷಣೆ
ಬೆಳಗಾವಿ: ಬೆಳಗಾವಿ ತಾಲೂಕಿನ ಕುದ್ರೆಮನಿ ಹಾಗೂ ಹುಕ್ಕೇರಿ ತಾಲೂಕಿನ ಬನ್ನಿಬಾಗಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಕಾಲರಾ ಪೀಡಿತ ಪ್ರದೇಶವೆಂದು ಜಿಲ್ಲಾ ದಂಡಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕುದ್ರೆಮನಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಕಲುಷಿತ ನೀರಿನಿಂದ 11 ಹಾಗೂ ಬನ್ನಿಬಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ 24 ವಾಂತಿ ಭೇದಿ ಪ್ರಕರಣ ಕಂಡು ಬಂದಿದ್ದು, ವಾಂತಿ-ಭೇದಿಯಿಂದ ಬಳಲುತ್ತಿರುವವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಗೂ ಕಾಲರಾ ತಡೆಗಟ್ಟುವ ನಿಟ್ಟಿನಲ್ಲಿ ಈ ಎರಡೂ ಗ್ರಾಮಗಳನ್ನು ಕಾಲರಾ ಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ. ಜಾತ್ರೆ, ಸಂತೆ ಹಾಗೂ ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ.
ಹುಲಿ ಪ್ರತ್ಯಕ್ಷ; ಆತಂಕ
ಎಚ್.ಡಿ. ಕೋಟೆ: ತಾಲೂಕಿನ ಹೆಗ್ಗಡಾಪುರ ಗ್ರಾಮದ ಬಳಿ ಇರುವ ಕೆರೆಯ ಸಮೀಪ ಹುಲಿಯೊಂದು ಪ್ರತ್ಯಕ್ಷವಾಗಿ ಸಾರ್ವಜನಿಕರು ಭಯ ಭೀತರಾಗಿದ್ದಾರೆ. ಹೆಗ್ಗಡಾಪುರ ಕೆರೆಯ ಏರಿಯ ಪಕ್ಕದ ಜಮೀನಿನಲ್ಲಿ ಸೋಮವಾರ ಹುಲಿಯು ಕುರಿಯನ್ನು ತಿಂದಿದೆ. ಬಳಿಕ ಮಂಗಳವಾರ ಸಹ ಹುಲಿಯು ಜಮೀನಿನಲ್ಲಿ ಪ್ರತ್ಯಕ್ಷವಾಗಿದ್ದರಿಂದ ಗಾಬರಿಗೊಂಡ ಗ್ರಾಮಸ್ಥರು, ಅರಣ್ಯ ಇಲಾಖೆಯವರಿಗೆ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕೆ ಎಚ್.ಡಿ. ಕೋಟೆ, ಮೇಟಿಕುಪ್ಪೆ ವಲಯಾರಣ್ಯಾಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಕಬ್ಬಿನ ಗದ್ದೆಯಲ್ಲಿ ಶೋಧಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

