ಬೆಳಗಾವಿ

ಇಂದು ಆರ್‌ಸಿಯು ಘಟಿಕೋತ್ಸವ

Published On :

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಚೊಚ್ಚಲ ಘಟಿಕೋತ್ಸವು ಫೆ.16 ರಂದು ಬೆಳಗ್ಗೆ 11.30 ಗಂಟೆಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸಭಾಭವನದಲ್ಲಿ ನಡೆಯಲಿದೆ.
ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ. ಎನ್. ವೆಂಕಟಾಚಲಯ್ಯ ಅವರು ಘಟಿಕೋತ್ಸವ ಭಾಷಣ ಮಾಡುವರು. ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅಧ್ಯಕ್ಷತೆ ವಹಿಸುವರು. ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಹಾಜರಿರುವರು.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ನ್ಯಾ. ಎಂ.ಎನ್. ವೆಂಕಟಾಚಲಯ್ಯ, ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಹಾಗೂ ನಾಗನೂರ ರುದ್ರಾಕ್ಷಿಮಠದ ಸಿದ್ಧರಾಮ ಸ್ವಾಮೀಜಿ, ಪ್ರೊ. ಐಷರ್ ಜಡ್ಜ್ ಅಹ್ಲುವಾಲಿಯಾ, ದಿ ನ್ಯೂ ಇಂಡಿಯನ್ ಎಕ್ಸಪ್ರೆಸ್ ವಿಶೇಷ ವರದಿಗಾರ ಡಾ.ಸರಜೂ ಕಾಟ್ಕರ್  ಪ್ರೊ. ಎಸ್. ಬಿಸಲಯ್ಯ, ಮರಣೋತ್ತರವಾಗಿ ಬಿ.ಎಂ. ಪಾಟೀಲ, ಡಾ.ಕೃಷ್ಣಸ್ವಾಮಿ ಕಸ್ತೂರಿ ರಂಗನ್, ಪ್ರೊ.ಎಂ.ಐ. ಸವದತ್ತಿ, ಜಿ. ವೆಂಕಟಸುಬ್ಬಯ್ಯ, ವೀರಣ್ಣ ಮತ್ತಿಕಟ್ಟಿ, ಮಾಜಿ ಮೇಯರ್ ಸಿದ್ದನಗೌಡ ಪಾಟೀಲ  ಅವರಿಗೆ ಚನ್ನಮ್ಮ ವಿವಿಯ ಗೌರವ ಡಾಕ್ಟರೇಟ್ ಪದವಿ ಪ್ರದಾನ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.