ಬೆಳಗಾವಿ

ಯುವ ಉದ್ಯಮಿಗಳಿಂದ ಆಶಾದಾಯಕ ಬದಲಾವಣೆ

Published On :

ಬೆಳಗಾವಿ: ಯುವ ಉದ್ಯಮಿಗಳು ದೇಶದಲ್ಲಿ ಆಶಾದಾಯಕ, ಅಭಿವೃದ್ಧಿಪರ ಬದಲಾವಣೆ ತೆಗೆದುಕೊಂಡು ಬಂದಿದ್ದಾರೆ ಎಂದು ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಎಂಬಿಎ ವಿಭಾಗದ ಅಧ್ಯಕ್ಷ ಡಾ. ಸಿ.ಎಂ. ತ್ಯಾಗರಾಜ ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಇತ್ತೀಚೆಗೆ ಕರ್ನಾಟಕ ಕಾನೂನು ಸಂಸ್ಥೆಯ ವ್ಯವಸ್ಥಾಪನಾ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆ ಆಯೋಜಿಸಿದ್ದ 'ಸಮಾಗಮ-2013' ಮ್ಯಾನೇಜಮೆಂಟ್ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ದೇಶದ ಉದ್ಯಮ ಕ್ಷೇತ್ರದಲ್ಲಿ ತರುಣ ಉದ್ಯಮಿಗಳ ಅಪೂರ್ವ ಸಾಧನೆಯ ಉದಾಹರಣೆ ಹಲವು ಇವೆ. ಹೀಗಾಗಿ ವಿದ್ಯಾರ್ಥಿಗಳು ಪಠ್ಯೇತರ, ವ್ಯಕ್ತಿತ್ವ ವಿಸಕನ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಇದು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಕಾನೂನು ಸಂಸ್ಥೆಯ ಕಾರ್ಯದರ್ಶಿ ಎಸ್.ಎಂ. ಕುಲಕರ್ಣಿ, ಸ್ಪರ್ಧೆಯಲ್ಲಿ ಗೆಲ್ಲುವುದು ಮುಖ್ಯವಲ್ಲ. ಆದರೆ, ಭಾಗವಹಿಸಿ ಜೀವನ ಕೌಶಲ್ಯಗಳನ್ನು ಅಳವಡಿಸಿಕೊಳ್ಳವುದು ಮುಖ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಮತ್ತು ಗಣ್ಯರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಐಎಂಇಆರ್ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಜಿ. ಪುಣೇಕರ, ಕಾರ್ಯಕ್ರಮದ ಸಂಯೋಜಕ ಡಾ. ಕೀರ್ತಿ ಶಿವಕುಮಾರ, ಡಾ. ಅರೀಫ್ ಶೇಖ್ ಮೊದಲಾದವರು ಇದ್ದರು.
ಡಾ. ಪುರಷೋತ್ತಮ ಬಂಗ್ ವಂದಿಸಿದರು. ಅನುತಾ ಶೆಟ್ಟಿ ಹಾಗೂ ಪ್ರಿಯಾಂಕಾ ಮೊರಪ್ಪನವರ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.