ಬೆಳಗಾವಿ

ಸೇವಾ ಸಮಿತಿ ಉದ್ಘಾಟನೆ

Published On :


ಬೆಳಗಾವಿ:  ಬೈಲಹೊಂಗಲ ತಾಲೂಕಿನ ಶಿರಿಯಾಲ (ಕೆಬಿ) ಗ್ರಾಮದಲ್ಲಿ ಇತ್ತೀಚೆಗೆ ಗ್ರಾಮೀಣ ಅಭಿವೃದ್ಧಿ ಸೇವಾ ಸಮಿತಿ ಉದ್ಘಾಟನೆ ಮತ್ತು ಗಣ್ಯರ ಸನ್ಮಾನ ಕಾರ್ಯಕ್ರಮ ನಡೆಯಿತು. ಮಲ್ಲೂರು ಸ್ವಾವೀಜಿ ಅವರಿಂದ ಸಮಿತಿ ಉದ್ಘಾಟನೆ ಮಾಡಿದರು. ಅಡಿವೆಪ್ಪ ಇಟಗಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಎಂ.ಎಂ. ಬಿದರಗಟ್ಟಿ, ಬಸವರಾಜ ಇಟಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಬೈಲಹೊಂಗಲದ ಉಪವಿಭಾಗಾಧಿಕಾರಿ ಸಿದ್ಧಲಿಂಗಯ್ಯ ಹಿರೇಮಠ ಅವರನ್ನು ಸನ್ಮಾನಿಸಲಾಯಿತು. ಸಿದ್ಧು ಇಟಗಿ ಸ್ವಾಗತಿಸಿದರು. ಗಿರೀಶ ಇಟಗಿ ವಂದಿಸಿದರು.
ಪದಾಧಿಕಾರಿಗಳ ನೇಮಕ
ಬೆಳಗಾವಿ:  ತಾಲೂಕಿನ ಯಮಕನಮರ್ಡಿ ವಿಧಾನಸಭೆ ಮತಕ್ಷೇತ್ರದ ಜೆಡಿಎಸ್ ಪಕ್ಷ ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಕಾಂತ ಬಡಗಾಂವಿ ಹಾಗೂ ಕಾರ್ಯಾಧ್ಯಕ್ಷರಾಗಿ ಅರುಣ ಉತ್ತೂರಿ ಅವರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಅಶೋಕ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೌಂದರ್ಯ ಪ್ರಥಮ
ಬೆಳಗಾವಿ: ಇಲ್ಲಿನ ರಾಮತೀರ್ಥ ನಗರದ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಸೌಂದರ್ಯ ಹಾದಿಮನಿ ಇತ್ತೀಚೆಗೆ ನಡೆದ ಚಿತ್ರ ಕಲೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡಿದಿದ್ದಾಳೆ. 64ನೇ ಗಣರಾಜ್ಯೋತ್ಸವ ಪ್ರಯುಕ್ತ ಬೆಳಗಾವಿ ಮಹಾನಗರ ಪಾಲಿಕೆ ಆಯೋಜಿಸಿದ್ದ 'ಪೌರ ಘನತ್ಯಾಜ್ಯ ವಸ್ತು ನಿರ್ವಹಣೆ' ವಿಷಯ ಕುರಿತು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಈ ಪ್ರಶಸ್ತಿ ಗೆದ್ದುಕೊಂಡಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆ ಶಾಲೆ ಮುಖ್ಯಾಧ್ಯಾಪಕ ಹಾಗೂ ಆಡಳಿತ ಮಂಡಳಿಯ ಸದಸ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.
ನಾಳೆ ವಾರ್ಷಿಕೋತ್ಸವ
ಬೆಳಗಾವಿ:  ಜಗಜ್ಯೋತಿ ಶಿಕ್ಷಣ ಮತ್ತು ಮಹಿಳಾ ಕ್ಷೇಮಾಭಿವೃದ್ಧಿ ಸಂಸ್ಥೆಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ನವೋದಯ ಪೂರ್ವ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ 12ನೇ ವಾರ್ಷಿಕೋತ್ಸವ ಹಾಗೂ ಪಾಲಕರ ದಿನಾಚರಣೆ ಫೆ.2 ಬೆಳಗ್ಗೆ 11 ಗಂಟೆಗೆ ನಡೆಯಲಿದೆ.  ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಉದ್ಘಾಟಿಸಿದರು. ಅತಿಥಿಗಳಾಗಿ ಶಾಸಕರಾದ ಫಿರೋಜ್ ಸೇಠ್, ಅಭಯ ಪಾಟೀಲ, ಕರ್ನಾಟಕ ಮಹಿಳಾ ಹಿಂದಿ ಸೇವಾ ಸಮಿತಿ ಕಾರ್ಯದರ್ಶಿ ಬಿ.ಎನ್. ಶಾಂತಾಬಾಯಿ, ಲಾಟರಿ ಮತ್ತು ಅಬಕಾರಿ ನಿಷೇಧ ದಳ ಪೊಲೀಸ್ ಇನ್ಸಪೆಕ್ಟರ್ ಎನ್.ವಿ. ಭರಮಣಿ, ನ್ಯಾಯವಾದಿ ಅನಿಲ ಬೆನಕೆ ಆಗಮಿಸುವರು. ನವೋದಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ವಿ. ಸೋಮಾಪುರ ಅಧ್ಯಕ್ಷತೆ ವಹಿಸುವರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.