ಕನ್ನಡ ಫಲಕಕ್ಕೆ ಮಸಿ
ಕ.ಪ್ರ.ವಾರ್ತೆ ಬೆಳಗಾವಿ ಮಾ.27
ಗಡಿನಾಡು ಬೆಳಗಾವಿಯಲ್ಲಿ ಮಂಗಳವಾರ ರಾತ್ರಿ ಕನ್ನಡ ಶಾಲೆಯೊಂದರ ಬಾಗಿಲು ಧ್ವಂಸಗೊಳಿಸಿದ್ದಲ್ಲದೇ, ಕನ್ನಡ ನಾಮಫಲಕಕ್ಕೆ ಮಸಿ ಬಳಿಯುವ ಮೂಲಕ ಎಂಇಎಸ್ ಗಡಿಭಾಗದಲ್ಲಿ ಮತ್ತೆ ಪುಂಡಾಟಿಕೆ ಮೆರೆದಿದೆ.
ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಕಾವೇರಿ ನಗರದ ಕನ್ನಡ ಶಾಲೆ ಎಂಇಎಸ್ ಪುಂಡಾಟಿಕೆಗೆ ಗುರಿಯಾಗಿದ್ದು, ವಾರದ ಹಿಂದಷ್ಟೇ ಈ ಶಾಲೆಯ ಕಟ್ಟಡ ಉದ್ಘಾಟನೆಯಾಗಿತ್ತು. ಇದನ್ನು ಸಹಿಸದ 20ಕ್ಕೂ ಅಧಿಕವಿದ್ದ ಯುವಕರ ಗುಂಪು ಶಾಲೆಗೆ ನುಗ್ಗಿದ್ದು, ಬಾಗಿಲುಗಳನ್ನು ಧ್ವಂಸಗೊಳಿಸಿದೆ. ಕಿಟಕಿಗೆ ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಕನ್ನಡ ನಾಮಫಲಕಕ್ಕೆ ಮಸಿ ಮಳಿದು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಉಂಟು ಮಾಡುವ ದುಷ್ಕೃತ್ಯವೆಸಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದ ಅಧಿಕಾರಿಗಳಾಗಲಿ, ಶಾಲಾ ಮೇಲುಸ್ತುವಾರಿ ಸಮಿತಿಯಾಗಲಿ ಠಾಣೆಗೆ ದೂರು ನೀಡಿಲ್ಲ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈ ದುಷ್ಕೃತ್ಯ ಎಸಗಿದವರು ಯಾರೇ ಆಗಿದ್ದರೂ ಅವರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಪಾಟೀಲ್ 'ಕನ್ನಡಪ್ರಭ'ಕ್ಕೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

