ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ಬೆಳಗಾವಿ: ನಗರದ ವಿವಿಧ ಪ್ರದೇಶದಲ್ಲಿ ಫೆ.13 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಅಂದು ಸದಾಶಿವ ನಗರದಲ್ಲಿ ತುರ್ತು ನಿರ್ವಹಣಾ ಕಾರ್ಯ ನಡೆಯಲಿರುವುದರಿಂದ ರೇಲ್ ನಗರ, ಸಂಪಿಗೆ ರಸ್ತೆ, ಅಂಬೇಡ್ಕರ ನಗರ, ಸದಾಶಿವ ನಗರ, ವಿಶ್ವೇಶ್ವರಯ್ಯಾ ನಗರ, ಕ್ಲಬ್ ರಸ್ತೆ, ಟಿವಿ ಸೆಂಟರ್, ಹನುಮಾನ ನಗರ, ಮುರಳಿಧರ ಕಾಲೋನಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಕಾರ್ಯ ನಿರ್ವಾಹಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ
ಬೆಳಗಾವಿ: ಜಿಲ್ಲಾ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2013-14ನೇ ಸಾಲಿನ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತ ನಿರುದ್ಯೋಗಿ ಯುವಕ, ಯುವತಿಯರಿಗೆ ಉಚಿತ ಕಂಪ್ಯೂಟರ್ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಫೆ.22 ಕೊನೆಯ ದಿನ. ಜಿಲ್ಲಾ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಬೆಳಗಾವಿ, ಅಥಣಿ, ಕಿತ್ತೂರ, ಬೈಲಹೊಂಗಲ, ಖಾನಾಪುರ ತಾಲೂಕಿನಲ್ಲಿ ಈ ಉಚಿತ ಕಂಪ್ಯೂಟರ್ ತರಬೇತಿ ನೀಡಲಿದೆ. ಆಸಕ್ತರು ತಮ್ಮ ಅರ್ಜಿಯನ್ನು ಜಿಲ್ಲಾ ಅಧಿಕಾರಿ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಬೆಳಗಾವಿ: ಜಿಲ್ಲೆಯಾದ್ಯಂತ ಬಾಲ ಕಾರ್ಮಿಕರ, ದುಡಿಯುವ ಮಕ್ಕಳ ಸಮೀಕ್ಷೆ ನಡೆಸಲು ಆಸಕ್ತ ಸ್ವಯಂ ಸೇವಾ ಸಂಸ್ಥೆಗಳಿಂದ ಫೆ.18ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು ನಿಗದಿತ ಅರ್ಜಿಯನ್ನು ಜಿಲ್ಲಾಧಿಕಾರಿಗಳು ಮತ್ತು ಅಧ್ಯಕ್ಷರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಅವರ ಹೆಸರಿನಿಂದ ಬೆಳಗಾವಿ ಉದ್ಯಮಬಾಗದ ಯೋಜನಾ ನಿರ್ದೇಶಕರು, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಸ್ಥೆ, ಕಾರ್ಮಿಕ ಭವನ, ಕಾರ್ಮಿಕ ಇಲಾಖೆ ಇವರಿಗೆ ಸಲ್ಲಿಸಲು ಪ್ರಕಟಣೆ ತಿಳಿಸಿದೆ.
ಅವಧಿ ವಿಸ್ತರಣೆ
ಬೆಳಗಾವಿ: ಕಡ್ಡಾಯ ಪ್ರಾಥಮಿಕ ಶಿಕ್ಷಣ ಕಾಯ್ದೆಯನ್ವಯ ಅನುದಾನ ರಹಿತ ಖಾಸಗಿ ಶಾಲೆಗಳ (ಭಾಷಾ ಮತ್ತು ಮತೀಯ ಅಲ್ಪ ಸಂಖ್ಯಾತ ವರ್ಗದ ಶಾಲೆಗಳನ್ನ್ನು ಹೊರತುಪಡಿಸಿ) 2014-15ನೇ ಸಾಲಿಗೆ ಶಾಲೆಗಳಲ್ಲಿ ಶೇ. 25 ರಷ್ಟು ನೆರೆಹೊರೆಯ ವಿದ್ಯಾರ್ಥಿಗಳಿಗೆ ಉಚಿತ ದಾಖಲಾತಿ ಪ್ರಕ್ರಿಯೆ ಆರಂಭವಾಗಿದ್ದು, ಪ್ರವೇಶ ಕೋರಿ ಅರ್ಜಿಯ ಜೊತೆ ಹಾಜರುಪಡಿಸಬೇಕಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯುವಲ್ಲಿ ವಿಳಂಬವಾಗುತ್ತಿರುವುದರಿಂದ ಅರ್ಜಿ ಸಲ್ಲಿಕೆ ದಿನವನ್ನು ಫೆ.19 ರ ವರೆಗೆ ವಿಸ್ತರಿಸಲಾಗಿದೆ ಎಂದು ಜಿಪಂ ಸಿಇಒ ದೀಪಾ ಚೋಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

