ಜವಳಿ ಪಾರ್ಕ್ ಸ್ಥಾಪನೆಗೆ ಯತ್ನ
ಬೆಳಗಾವಿ: ನೇಕಾರರ ಹಿತ ಕಾಪಾಡುವುದಕ್ಕಾಗಿ ಬೆಳಗಾವಿಯಲ್ಲಿ ಟೆಕ್ಸಟೈಲ್ ಪಾರ್ಕ್ ನಿರ್ಮಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳಕರ ಹೇಳಿದ್ದಾರೆ.
ಗುರುವಾರ ನಗರದ ವಡಗಾಂವಿ, ಶಹಾಪುರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿ ಅವರು ಮಾತನಾಡಿದರು.
ಹಲವಾರು ದಶಕಗಳಿಂದ ನೇಕಾರರು ಹತ್ತು ಹಲವಾರು ಸಮಸ್ಯೆ ಎದುರಿಸುತ್ತಿದ್ದು, ನೇಕಾರರ ಒಳಿತಿಗೆ ಕೇಂದ್ರ ಸರ್ಕಾರದಿಂದ ಅನೇಕ ಯೋಜನೆಗಳನ್ನ್ನು ಮಂಜೂರು ಮಾಡಿಸುವೆ. ಜಿಲ್ಲೆಯಲ್ಲಿ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ನೇಕಾರರು ಸಿದ್ಧಪಡಿಸುವ ಸೀರೆ ಸೇರಿದಂತೆ ವಿವಿಧ ಉತ್ಪನ್ನಗಳಿಗೆ ರಾಷ್ಟ್ರಮಟ್ಟದ ಮಾರುಕಟ್ಟೆ ಒದಗಿಸಿ ನೇಕಾರ ಬದುಕಿಗೆ ಅನುಕೂಲವಾಗುವಂತಹ ಕೆಲಸ ಮಾಡುವುದಾಗಿ ಹೆಬ್ಬಾಳಕರ ಹೇಳಿದ್ದಾರೆ.
ಬರುವ ಏ.17 ರಂದು ಮತದಾರರು ತಪ್ಪದೇ ಮತಚಲಾಯಿಸಬೇಕು. ಅಂದು ದೈನಂದಿನ ಚಟುವಟಿಕೆಗಳಿಗೆ ವಿರಾಮ ನೀಡಿ ತಮ್ಮ ಹಕ್ಕು ಚಲಾಯಿಸುವದರ ಮೂಲಕ ಕಾಂಗ್ರೆಸ್ ಪಕ್ಷವನ್ನ್ನು ಬಹುಮತದಿಂದ ಗೆಲ್ಲಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.
ದೇಶದ ನೆಮ್ಮದಿಗಾಗಿ ಕೋಮುವಾದಿ ಬಿಜೆಪಿಗೆ ತಕ್ಕ ಪಾಠ ಕಲಿಸುವ ಸಮಯ ಈಗ ಬಂದಿದೆ. ಜಾತ್ಯತೀತ ತತ್ವಗಳ ತಳಹದಿಯಲ್ಲಿ ಸರ್ವ ಸಮಾಜಗಳ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರಗಳು ಯೋಜನೆಗಳನ್ನು ರೂಪಿಸಿದೆ. ಈ ಮೂಲಕ ಎಲ್ಲ ಸಮಾಜಗಳನ್ನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಬದ್ಧತೆಯನ್ನು ಕಾಂಗ್ರೆಸ್ ಪ್ರದರ್ಶಿಸಿದೆ ಎಂದರು.
ಕಾಂಗ್ರೆಸ್ ಪಕ್ಷಕ್ಕೆ ಸಿಗುತ್ತಿರುವ ಜನಬೆಂಬಲದಿಂದ ಬಿಜೆಪಿ ಕಂಗಾಲಾಗಿದೆ. ಹೀಗಾಗಿ ಹತಾಶ ಮನೋಭಾವನೆಯಿಂದ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಇಲ್ಲ-ಸಲ್ಲದ ಟೀಕೆ ಮಾಡುತ್ತಿದ್ದಾರೆ. ಜತೆಗೆ ಭಾರತ ನಿರ್ಮಾಣ ರ್ಯಾಲಿಯ ಮೂಲಕ ರಾಹುಲ ಗಾಂಧಿ ಜನಾಭಿಪ್ರಾಯ ಸಂಗ್ರಹಿಸಿ ಜನಪರ ಪ್ರಣಾಳಿಕೆ ಪ್ರಕಟಿಸಿದ್ದು, ನುಡಿದಂತೆ ನಡೆಯುವ ಕಾಂಗ್ರೆಸ್ನ್ನು ಮತದಾರರು ಬೆಂಬಲಿಸಬೇಕೆಂದು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಮೇಶ ಸೊಂಟಕ್ಕಿ, ಯುವರಾಜ ಕದಂ, ಮಲ್ಲೇಶ ಚೌಗಲೆ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

