ಯುವತಿ ಅಪಹರಿಸಿ ಅತ್ಯಾಚಾರ: ಬಂಧನ
ಹಗರಿಬೊಮ್ಮನಹಳ್ಳಿ: ಹಳೆಹಗರಿಬೊಮ್ಮನಹಳ್ಳಿಯ ಗುತ್ತಿಗೆದಾರನೊಬ್ಬ ಯುವತಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದಲ್ಲದೆ ವಿಷ ಕುಡಿಸಿ ಹತ್ಯೆಗೈಯಲು ಯತ್ನಿಸಿದ ಘಟನೆ ಭಾನುವಾರ ಸಂಭವಿಸಿದೆ. ಯುವತಿಯನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಗೆಲಸ ಮಾಡುತ್ತಿದ್ದ ಯುವತಿ ಹಳೆಹಗರಿಬೊಮ್ಮನಹಳ್ಳಿಯ ತಂಬ್ರಹಳ್ಳಿ ರಸ್ತೆಯ ಶಿಬಾರಗಟ್ಟೆ ಬಳಿ ವಾಸವಾಗಿದ್ದಳು. ದೂರದ ಸಂಬಂಧಿಯಾದ ಅಬೂಬಕರ್ (55) ಹೊಸಪೇಟೆಯಲ್ಲಿ ವಾಸವಾಗಿದ್ದಾನೆ. ಜ.31ರಂದು ಹಳೆಹಗರಿಬೊಮ್ಮನಹಳ್ಳಿಗೆ ಬಂದಾಗ ರಾತ್ರಿ ವೇಳೆ ಯುವತಿಯನ್ನು ಮನೆಗೆಲಸದ ನೆಪ ಮಾಡಿ ಅಪಹರಿಸಿಕೊಂಡು ಹೋಗಿದ್ದಾನೆ. ಸತತ ಎರಡು ದಿನಗಳ ಕಾಲ ಆಕೆಯ ಮೇಲೆ ಅತ್ಯಾಚಾರ ಎಸಗಿ ಭಾನುವಾರ ಪಟ್ಟಣದ ಕೂಡ್ಲಿಗಿ ರಸ್ತೆಯ ಮುಸ್ಲಿಂ ಖಬರಸ್ಥಾನದ ಬಳಿಗೆ ಬೈಕ್ನಲ್ಲಿ ಕರೆತಂದು ಬಿಟ್ಟಿದ್ದಾನೆ. ಯುವತಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

