ಬಳ್ಳಾರಿ

ಶೆಟ್ಟಿ ತಿಂದಪ್ಪ ಜೆಡಿಎಸ್‌ಗೆ?

Published On :

ಕೊಟ್ಟೂರು:  ಸ್ಥಳೀಯ ಬಿಜೆಪಿ ಮುಖಂಡ ಶೆಟ್ಟಿ ತಿಂದಪ್ಪ ಅವರನ್ನು ಸೆಳೆಯಲು ಜೆಡಿಎಸ್ ಪ್ರಯತ್ನ ನಡೆಸಿದೆ. ಹರಪನಹಳ್ಳಿಗೆ ಇತ್ತೀಚೆಗೆ ಆಗಮಿಸಿದ್ದ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಬಸವನಗೌಡ ಯತ್ನಾಳ್ ತಿಂದಪ್ಪ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಕರೆಸಿಕೊಂಡಿದ್ದಾರೆ. ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಜೆಡಿಎಸ್ ಸೇರುವಂತೆ ಆಹ್ವಾನ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ರಾಜ್ಯ ಮತ್ತು ಹಿರಿಯ ನಾಯಕರ ನಡವಳಿಕೆಯಿಂದ ರೋಸಿ ಹೋಗಿರುವ ಶೆಟ್ಟಿ ತಿಂದಪ್ಪ ಕೆಲವು ದಿನಗಳಿಂದ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರಲಿಲ್ಲ.  ಈ ಸಂಬಂಧ 'ಕನ್ನಡಪ್ರಭ' ತಿಂದಪ್ಪ ಅವರನ್ನು ಸಂಪರ್ಕಿಸಿದಾಗ, ಬಿಜೆಪಿ ರಾಜ್ಯ ನಾಯಕರ ಕಣ್ಣುಗಳು ಅಧಿಕಾರದ ಮದದಿಂದ ಮುಚ್ಚಿಹೋಗಿವೆ. ಬಳ್ಳಾರಿ ಮುಖಂಡರನ್ನೇ ಇಡೀ ಜಿಲ್ಲೆಯನ್ನು ಪ್ರತಿನಿಧಿಸುವ ಮಹಾನ್ ನಾಯಕರಂತೆ ಬಿಂಬಿಸುತ್ತಿದ್ದಾರೆ ಎಂದು ಆರೋಪಿಸಿದರು. ಬಸವನಗೌಡ ಪಾಟೀಲ್ ಯತ್ನಾಳ್ ವಿಶ್ವಾಸದ ನಾಯಕರಾಗಿದ್ದು, ಅವರಿದ್ದ ಕಡೆ ತಾವು ತೆರಳಲು ಮನಸ್ಸು ಮಾಡಿದ್ದೇನೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.