ಬಳ್ಳಾರಿ

ಬೈಕ್‌ಗೆ ಕಾರ್ ಡಿಕ್ಕಿ: ಇಬ್ಬರಿಗೆ ಗಾಯ

Published On :

ಬಳ್ಳಾರಿ: ಉಪಮಹಾಪೌರರ ಕಾರು ಚಾಲಕ ಕುಡಿದ ಅಮಲಿನಲ್ಲಿ ಇನ್ನೋವಾ ವಾಹನ ಚಾಲನೆ ಮಾಡಿದ್ದರಿಂದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೆ ಗಾಯವಾದ ಘಟನೆ ಸೋಮವಾರ ಬೆಳಗ್ಗೆ ಕಣೇಕಲ್ ಬಸ್ ನಿಲ್ದಾಣದ ಸಮೀಪದಲ್ಲಿ ನಡೆದಿದೆ. ಕಾರಿನ ಚಾಲಕನನ್ನು ಸಾರ್ವಜನಿಕರು ಥಳಿಸಿದ್ದಾರೆ. ಪೊಲೀಸರು ಇನ್ನೋವಾವನ್ನು ವಶಪಡಿಸಿಕೊಂಡಿದ್ದಾರೆ. ನಗರದ ಮಂಡೂರು ಕೃಷ್ಣಮೂರ್ತಿ ಹಾಗೂ ನಾಸಿರ ಹುಸೇನ್ ಗಾಯಗೊಂಡಿದ್ದಾರೆ. ಸೋಮವಾರ ಬೆಳಗ್ಗೆ ಕಣೇಕಲ್ ಬಸ್ ನಿಲ್ದಾಣದ ಸಮೀಪದಲ್ಲಿ ಉಪಮಹಾಪೌರರ ಕಾರು ಚಾಲಕ ಕಂಟ ಪೂರ್ತಿ ಕುಡಿದು, ಚಾಲನೆ ಮಾಡಿದ್ದು, ಬೈಕ್‌ಗೆ ಗುದ್ದಿದ್ದಾನೆ. ಸ್ಥಳದಲ್ಲಿದ್ದ ಸಾರ್ವಜನಿಕರು ಚಾಲಕರನ್ನು ಥಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಸಂಚಾರಿ ಪೊಲೀಸರು ಉಪಮಹಾಪೌರರ ಕಾರು ಹಾಗೂ ಬೈಕ್‌ನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.