ಬಳ್ಳಾರಿ

ಸಿಂಚನ ಕಾವ್ಯ ಸ್ಪರ್ಧೆ

Published On :

ಹೂವಿನಹಡಗಲಿ: ವಿಶ್ವ ಪುಸ್ತಕ ದಿನಚರಣೆ ಅಂಗವಾಗಿ ಸಿಂಚನ ಸಾಹಿತ್ಯಿಕ ಪತ್ರಿಕೆ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಿಂಚನ ಕಾವ್ಯ ಸ್ಪರ್ಧೆ ಆಯೋಜಿಸಿದೆ. 2011-12ರಲ್ಲಿ ಪ್ರಕಟಗೊಂಡಿರುವ ಕವನ ಸಂಕಲನಗಳನ್ನು ಕವಿಗಳು ಸ್ಪರ್ಧೆಗೆ ಕಳುಹಿಸಬಹುದಾಗಿದೆ. ಪ್ರಥಮ ಸ್ಥಾನ ಪಡೆದವರಿಗೆ ರು. 5 ಸಾವಿರ ನಗದು ನೀಡಿ ಪ್ರಶಸ್ತಿ ಪತ್ರದೊಂದಿಗೆ ಗೌರವಿಸಲಾಗುವುದು. ಕವನ ಸಂಕಲನಗಳನ್ನು ಸ್ಪರ್ಧೆಗೆ ಸ್ವೀಕರಿಸಲು ಕೊನೆಯ ದಿ: 23 ಮಾರ್ಚ್ 2013 ಆಗಿದೆ.
ಸ್ಪರ್ಧಾತ್ಮಕ ಪರೀಕ್ಷೆ: ಉಚಿತ ತರಬೇತಿ
ಬಳ್ಳಾರಿ: ಕರ್ನಾಟಕ ರಾಜ್ಯ ಮುಕ್ತ ವಿವಿ (ಕರಾಮುವಿ) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸಲು ಉದ್ದೇಶಿಸಿರುವ ಐಎಎಸ್ ಹಾಗೂ ಕೆಎಎಸ್ ಪೂರ್ವಭಾವಿ ಪರೀಕ್ಷೆಗೆ ಉಚಿತ ತರಬೇತಿ ನೀಡಲು ಉದ್ದೇಶಿಸಿದೆ ಎಂದು ಕುಲಸಚಿವ ಪ್ರೊ. ಬಿ.ಎಸ್. ವಿಶ್ವನಾಥ್ ತಿಳಿಸಿದ್ದಾರೆ. ಆಸಕ್ತರು ಫೆ.11ರೊಳಗಾಗಿ ಕರ್ನಾಟಕ ರಾಜ್ಯ ಮುಕ್ತ ವಿವಿ ಮುಕ್ತಗಂಗೋತ್ರಿ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂ. 0821-2515944 ಅನ್ನು ಸಂಪರ್ಕಿಸಬಹುದೆಂದು ಅವರು ತಿಳಿಸಿದ್ದಾರೆ.
ಕಟ್ಚಡದಿಂದ ಬಿದ್ದು ಕಾರ್ಮಿಕ ಸಾವು
ಬಳ್ಳಾರಿ: ಕಟ್ಟಡ ನಿರ್ಮಾಣದ ಕಾರ್ಮಿಕನೋರ್ವ ಕೆಳಗೆ ಬಿದ್ದು ಮೃತ ಪಟ್ಟ ಘಟನೆ ನಗರದ ಟಿಬಿ ಸ್ಯಾನಿಟೋರಿಯಂ ಸಮೀಪದಲ್ಲಿ ನಡೆದಿದೆ. ಮೃತನನ್ನು ಆಂಧ್ರಪ್ರದೇಶದ ಮೆಹಬೂಬ ನಗರ ಜಿಲ್ಲೆಯ ರಾಜು (22) ಎಂದು ಗುರುತಿಸಲಾಗಿದೆ. ಈತನು ಟಿಬಿ ಸ್ಯಾನಿಟೋರಿಯಂ ಸಮೀಪದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣದಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಬಿದ್ದಿದ್ದಾನೆ. ಕೂಡಲೇ ವಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ಈ ಕುರಿತು ಕೌಲ್‌ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.