ಸುದ್ದಿ ಸಂಕ್ಷೇಪ
ಅಪಘಾತ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು
ಸಿರುಗುಪ್ಪ: ಅಪರಿಚಿತ ಲಾರಿಯೊಂದು ಬೈಕ್ಗೆ ಮುಖಮುಖಿ ಡಿಕ್ಕಿಹೊಡೆದ ಪರಿಣಾಮ ಬೈಕ್ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ತೆಕ್ಕಲಕೋಟೆ ಸಮೀಪದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತನನ್ನು ಸಿರುಗುಪ್ಪ ತಾಲೂಕಿನ ಕರೂರು ಗ್ರಾಮದ ವಿರೂಪಾಕ್ಷರೆಡ್ಡಿ (32) ಎಂದು ಗುರ್ತಿಸಲಾಗಿದೆ. ಕರೂರಿನಿಂದ ಸಿರುಗುಪ್ಪಕ್ಕೆ ಹೋಗುತ್ತಿರುವಾಗ ಎದುರಿಗೆ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತನಾಗಿದ್ದಾನೆ. ಈ ಕುರಿತಾಗಿ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ಮಿನಿ ಉದ್ಯೋಗ ಮೇಳ
ಬಳ್ಳಾರಿ: ಕೌಶಲ್ಯ ಆಯೋಗ, ಉದ್ಯೋಗ ಮತ್ತು ತರಬೇತಿ ಇಲಾಖೆ, ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಜಂಟಿಯಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಫೆ. 24ರಂದು ಬೆಳಗ್ಗೆ 10 ಗಂಟೆಗೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಉದ್ಯೋಗಾಧಿಕಾರಿ ಹಟ್ಟೆಪ್ಪ ತಿಳಿಸಿದ್ದಾರೆ. ಬೆಂಗಳೂರು ಮೂಲದ ಕಂಪನಿಗಳು ಭದ್ರತಾ ಅಧಿಕಾರಿಗಳು, ಸಹಾಯಕ ಭದ್ರತಾ ಅಧಿಕಾರಿಗಳು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗಾಗಿ ಮೇಳದಲ್ಲಿ ಪಾಲ್ಗೊಳ್ಳಲಿವೆ. ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಯಾವುದೇ ಪದವೀಧರರು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9844444958, 90364 22052 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

