ಸಂತೋಷ್ ಲಾಡ್ ಹುಟ್ಟುಹಬ್ಬ: ಸಸಿ ವಿತರಣೆ
ಸಂಡೂರು: ಕಲಘಟಗಿ ಶಾಸಕ ಸಂತೋಷ್ ಲಾಡ್ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿ, ಕಾಂಗ್ರೆಸ್ ಮುಖಂಡ ಆರ್. ಶಿವರಾಂ ಬುಧವಾರ ತಾಲೂಕಿನ ಜೈಸಿಂಗ್ಪುರದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮಾವು, ನಿಂಬೆ ಹಾಗೂ ಸಪೋಟ ಹಣ್ಣಿನ ಸಸಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಹುಲುಗಪ್ಪ, ಉಪಾಧ್ಯಕ್ಷ ಹನುಮಂತ, ಪಂಚಮಸಾಲಿ ಸಮಾಜದ ಗ್ರಾಮ ಘಟಕದ ಅಧ್ಯಕ್ಷ ಡಿ. ರಮೇಶ್, ಉಪಾಧ್ಯಕ್ಷ ಚೆನ್ನಬಸವಪ್ಪ, ವಾಲ್ಮೀಕಿ ಮಹಾಸಭಾದ ಗ್ರಾಮ ಘಟಕದ ಅಧ್ಯಕ್ಷ ತಾಯಪ್ಪ, ಎನ್. ಭೀಮಪ್ಪ ಹಾಗೂ ಶಾಲೆಯ ಶಿಕ್ಷಕರಾದ ವೈ. ಜಯಪ್ಪ, ಪ್ರಶಾಂತ್ಕುಮಾರ್ ಹಾಗೂ ಜೆ.ಎಂ. ಅಂಗಡಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

