ದೇಶದ ಐಕ್ಯತೆ ಕಾಪಾಡಿ: ನಾಗರಾಜ
ಹಗರಿಬೊಮ್ಮನಹಳ್ಳಿ: ಪಟ್ಟಣದ ರಾಮನಗರದಲ್ಲಿನ ಗಂ.ಭೀ ಸರ್ಕಾರಿ ಪಪೂ ಕಾಲೇಜು ಆವರಣದಲ್ಲಿರುವ ಕ್ರೀಡಾಂಗಣದಲ್ಲಿ ಶನಿವಾರ 64ನೇ ಗಣರಾಜ್ಯೋತ್ಸವ ಸಮಾರಂಭವನ್ನು ಅತ್ಯಂತ ಸಡಗರ, ಸಂಭ್ರಮದೊಂದಿಗೆ ಆಚರಿಸಲಾಯಿತು.
ತಹಸೀಲ್ದಾರ್ ನಾಗರಾಜ ಭಟ್ ರಾಷ್ಟ್ರ ಧ್ವಜಾರೋಹಣ ನೇರವೇರಿಸಿ ಮಾತನಾಡಿ, ಲಕ್ಷಾಂತರ ದೇಶಭಕ್ತರ ತ್ಯಾಗ, ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಹೆಚ್ಚುತ್ತಿರುವ ಭಯೋತ್ಪಾದಾನೆಯನ್ನು ಹತ್ತಿಕ್ಕಿ, ದೇಶದ ಐಕ್ಯತೆ, ಸಮಗ್ರತೆಗಾಗಿ ಶ್ರಮಿಸುವುದು ನಮ್ಮ ಅದ್ಯ ಕರ್ತವ್ಯವಾಗಿದೆ. ನಾವೆಲ್ಲರೂ ಇಂದು ದೇಶದ ಅಭಿವೃದ್ಧಿಗಾಗಿ ದುಡಿಯೋಣ ಎಂದು ಕರೆ ಕೊಟ್ಟರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ. ನೇಮಿರಾಜ ನಾಯ್ಕ ಮಾತನಾಡಿ, ಕ್ಷೇತ್ರದಲ್ಲಿ ಸಾಕಷ್ಟು ಪ್ರಮಾಣದ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೊಳಿಸಲಾಗಿದೆ. ಲಭ್ಯ ಇರುವ ಎಲ್ಲ ನೀರಾವರಿ ಮೂಲಗಳಿಂದ ಕ್ಷೇತ್ರದಲ್ಲಿನ ಕೆರೆಗಳನ್ನು ತುಂಬಿಸುವ ಹಾಗೂ ಹೊಸ ಏತನೀರಾವರಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಕ್ಷೇತ್ರದಲ್ಲಿ ನೀರಾವರಿ ಕಾರ್ಯಗಳನ್ನು ಗಣನೀಯ ಪ್ರಮಾಣದಲ್ಲಿ ಮಾಡಲಾಗುವುದು ಎಂದರು.
ಆಕರ್ಷಕ ಪಥ ಸಂಚಲನ: ಇದಕ್ಕೂ ಮುನ್ನ ಪಟ್ಟಣದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಆರಕ್ಷಕ ಪಡೆ, ಅಗ್ನಿಶಾಮಕ, ಗೃಹರಕ್ಷಕ ದಳ, ಸ್ಕೌಟ್ಸ್ ಅಂಡ್ ಗೈಡ್ ಸೇರಿದಂತೆ ವಿವಿಧ ಪಡೆಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಹಾಗೂ ಪ್ರಸಿದ್ದಿ ಶಾಲೆ ಮಕ್ಕಳು ನಡೆಸಿಕೊಟ್ಟ ಘೋಷ್ ವಾದನ ನೆರೆದಿದ್ದವರ ಮನ ತಣಿಸಿತು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವವರನ್ನು ತಾಲೂಕು ಆಡಳಿತದ ಪರವಾಗಿ ಸನ್ಮಾನಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಲ್ಲಕಂಬ, ಕರಾಟೆ ಪ್ರದರ್ಶನಗಳು ಜರುಗಿದವು.
ಜಿಪಂ ಉಪಾಧ್ಯಕ್ಷೆ ಮಮತಾ ಸುರೇಶ, ತಾಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಪೂರ್ಯನಾಯ್ಕ, ಉಪಾಧ್ಯಕ್ಷೆ ಕುರುಬರ ನಾಗರತ್ನಮ್ಮ, ಜಿಪಂ ಸದಸ್ಯರಾದ ಕೊಗಳಿ ಕರಿಬಸವನಗೌಡ್ರ ರತ್ನಮ್ಮ, ರೋಗಾಣಿ ಹುಲುಗಪ್ಪ, ತಾಪಂ ಸದಸ್ಯರಾದ ಬಿ. ಗಂಗಮ್ಮ ಹನುಮಂತಪ್ಪ, ಎಂ.ಎಂ. ಶಿವಕುಮಾರ, ಬೆಣಕಲ್ ಕೊಟ್ರೆಶ್, ಚಿಂತ್ರಪಳ್ಳಿ ಗ್ರಾಪಂ ಅಧ್ಯಕ್ಷ ಎಂ. ಆನಂದ್, ಹಗರಿಬೊಮ್ಮನಹಳ್ಳಿ ಗ್ರಾಪಂ ಅಧ್ಯಕ್ಷ ಜಿ.ಎಂ. ಶಿವಕುಮಾರ, ಕಸಾಪ ಅಧ್ಯಕ್ಷ ರೆಡ್ಡಿ ನಾಯ್ಕ, ಜೆಡಿಎಸ್ ಅಧ್ಯಕ್ಷ ವೈ. ಮಲ್ಲಿಕಾರ್ಜುನ, ಮಾತಾಗ್ಯಾಸ್ ಎರ್ರಿಸ್ವಾಮಿ, ಖಾದಿ ಮಂಡಳಿ ಜಿಲ್ಲಾಧ್ಯಕ್ಷ ನರೆಗಲ್ ಕೊಟ್ರೇಶ್, ಬಿಜೆಪಿ ಮುಖಂಡ ಕಿನ್ನಾಳ ಸುಭಾಷ್, ಎಪಿಎಂಸಿ ಅಧ್ಯಕ್ಷ ಕೆ. ರೋಹಿತ್, ಉಪಾಧ್ಯಕ್ಷ ಪೂಜಾರ ಮೂರ್ತೆಪ್ಪ, ಡಿಶ್ ಮಂಜುನಾಥ, ಕೇಣಿ ಬಸಪ್ಪ, ಬಿಇಓ ರಾಮನಗೌಡ ಭಾಗವಹಿಸಿದ್ದರು.
ತಾಪಂ ಇಓ ಜಿ. ಗೋಪ್ಯಾನಾಯ್ಕ ಸ್ವಾಗತಿಸಿ, ನಾಗಭೂಷಣ ವಂದಿಸಿದರು. ಡಿ.ಟಿ. ತೇನಸಿಂಗ್ ನಾಯ್ಕ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

