ಇಂದು ಉಚಿತ ತರಬೇತಿ
ಬಳ್ಳಾರಿ: ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿಯಡಿ ಪಾಲಿಟೆಕ್ನಿಕ್ ಮೂಲಕ ತಾಲೂಕಿನ ಹರಗಿನಡೋಣಿ ಗ್ರಾಮದಲ್ಲಿ ಜ. 30ರಂದು ಉಚಿತ ಸಮುದಾಯ ಅಭಿವೃದ್ಧಿ ತರಬೇತಿಗಳು, ಆರೋಗ್ಯ ತಪಾಸಣಾ ಶಿಬಿರ, ಸಸಿ ನೆಡುವ ಕಾರ್ಯಕ್ರಮ, ತಂತ್ರಜ್ಞಾನದ ಬಗ್ಗೆ ಮಾಹಿತಿ ನೀಡುವ ಹಾಗೂ ಮತ್ತಿತರ ಉಪಯುಕ್ತ ಚಟುವಟಿಕೆಯ ಸೇವೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಹರಗಿನಡೋಣಿ ಗ್ರಾಮದ ಭುಗ್ಗೇಶ್ವರ ಮಠದಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮವನ್ನು ಸಿದ್ಧಲಿಂಗೇಶ್ವರ ಸ್ವಾಮೀಜಿ ಹಾಗೂ ಬಿ. ಬೆಳಗಲ್ ಗ್ರಾಪಂ ಅಧ್ಯಕ್ಷೆ ಗಂಗಮ್ಮ ಉದ್ಘಾಟಿಸಲಿದ್ದಾರೆ. ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯ ಪಿ. ಲಿಂಗಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಬಿ. ಬೆಳಗಲ್ಲು ಗ್ರಾಪಂ ಉಪಾಧ್ಯಕ್ಷೆ ಜೆ.ಎನ್. ಭವಾನಮ್ಮ, ಸದಸ್ಯರು ಹಾಗೂ ಗ್ರಾಮದ ಮುಖಂಡರ ಸಹಕಾರದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮನೆ ಬಳಕೆ ವಸ್ತುಗಳ ಮಾಹಿತಿ, ಉಪಯೋಗ ಕುರಿತು ತಿಳಿಸಲಾಗುವುದು. ಗ್ರಾಮವನ್ನು ಹಸಿರಾಗಿಡುವ ಸಲುವಾಗಿ ವಿವಿಧ ಜಾತಿಯ ಸಸಿಗಳನ್ನು ನೆಡುವ ಸೇವೆಯನ್ನು ಒದಗಿಸಲಾಗುವುದು. ಆರೋಗ್ಯವೇ ಮಹಾಭಾಗ್ಯ ಕಾರ್ಯಕ್ರಮದಡಿ ವೈದ್ಯಾರಿಂದ ಸಾರ್ವಜನಿಕರ ಆರೋಗ್ಯ ತಪಾಸಣೆ ಹಾಗೂ ಸಾಮಾನ್ಯ ಔಷಧಿಗಳ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

