ಬಳ್ಳಾರಿ

ಫೆ. 3ರಂದು ಯೋಜನೆಗೆ ಭೂಮಿಪೂಜೆ

Published On :


ಕನ್ನಡಪ್ರಭ ವಾರ್ತೆ, ಹೂವಿನಹಡಗಲಿ, ಜ. 29

ಸಿಂಗಟಾಲೂರು ಏತ ನೀರಾವರಿ ಯೋಜನೆಯಿಂದ ತಾಲೂಕಿನ 10 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಫೆ. 3ರಂದು ಭೂಮಿಪೂಜೆ ಮಾಡಿ, ಕಾಮಗಾರಿ ಆರಂಭಿಸಲಾಗುವುದು ಎಂದು ಶಾಸಕ ಚಂದ್ರನಾಯ್ಕ ಹೇಳಿದರು.
ತಳಕಲ್ಲು ಕೆರೆಗೆ ನೀರು ತುಂಬಿಸುವ ಹೋರಾಟ ಸಮಿತಿಯಿಂದ ಮನವಿ ಸ್ವೀಕರಿಸಿ ಮಾತನಾಡಿ, ಈ ಹಿಂದೆಯೇ ಕಾಮಗಾರಿ ಆರಂಭಿಸಬೇಕಿತ್ತು. ಆದರೆ ತುಂಗಭದ್ರಾ ನದಿ ನೀರಿನ ಹಂಚಿಕೆಯಲ್ಲಿ ಕೆಲವು ತೊಡಕು ಇದ್ದ ಕಾರಣ ವಿಳಂಬವಾಗಿತ್ತು. ಈಗ ಯೋಜನೆಯ # 0.5 ಟಿಎಂಸಿ ನೀರು ಬಳಕೆ ಮಾಡಿಕೊಳ್ಳಲು ಅನುಮತಿ ದೊರೆತಿದೆ ಎಂದರು.
# 105 ಕೋಟಿ ಮಂಜೂರು: 10 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುಲ್ಬರ್ಗದಲ್ಲಿ ನಡೆದ ವಿಶೇಷ ಅಧಿವೇಶನದಲ್ಲೇ # 76 ಕೋಟಿ ಮಂಜೂರಾತಿ ನೀಡಿದ್ದರು. ಕಾಮಗಾರಿ ವಿಳಂಬವಾಗಿದ್ದರಿಂದ ಈಗ ಸರ್ಕಾರ ಮತ್ತೆ # 105 ಕೋಟಿ ಮಂಜೂರಾಗಿ ನೀಡಿದೆ. ತಾಲೂಕಿನ ಯಾವುದಾದರೊಂದು ಕೆರೆಯಲ್ಲಿ ಭೂಮಿಪೂಜೆ ಮಾಡಿ, ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.
ಸತತ ಬರಗಾಲಕ್ಕೆ ತುತ್ತಾಗುತ್ತಿರುವ ತಾಲೂಕಿನಲ್ಲಿ ನೀರಾವರಿ ಸೌಲಭ್ಯ ಕಡಿಮೆಯಾಗಿದೆ. ತಾಲೂಕಿನ 10 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಿಂದ ರೈತರ ಸಾವಿರಾರು ಎಕರೆ ಖುಷ್ಕಿ ಜಮೀನುಗಳಿಗೆ ನೀರುಣಿಸಲು ಸಾಧ್ಯವಾಗಲಿದೆ. ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿ, ನಿರಂತರವಾಗಿ ನೀರು ಸಿಗಲಿದೆ. ಇದರಿಂದ ರೈತರ ಬದುಕು ಹಸನಾಗಲಿದೆ ಎಂದರು.
ಸಿಂಗಟಾಲೂರು ಏತ ನೀರಾವರಿ ಯೋಜನೆಯಿಂದ ಇನ್ನು ಹೆಚ್ಚಿನ ಸೌಲಭ್ಯ ಪಡೆಯಲು ಈ ಹಿಂದೆಯೇ ರೈತ ಪರ ಪ್ರಬಲ ಹೋರಾಟ ನಡೆದಿದ್ದರೆ ಬಲದಂಡೆ ಭಾಗಕ್ಕೆ ಇನ್ನು ಹೆಚ್ಚಿನ ಪ್ರಯೋಜನ ಪಡೆಯಬಹುದಿತ್ತು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.