ಬಳ್ಳಾರಿ

ಸಂಡೂರು: ಗೃಹರಕ್ಷಕ ದಳ ಪಥ ಸಂಚಲನ

Published On :

ಸಂಡೂರು: ಸಂಡೂರು ಪುರಸಭೆಯ 23 ವಾರ್ಡ್‌ಗಳಿಗೆ ನಡೆಯಲಿರುವ ಚುನಾವಣೆಗಾಗಿ ಒಟ್ಟು 25 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಇವುಗಳಲ್ಲಿ 4 ಅತಿಸೂಕ್ಷ್ಮ, 2 ಸೂಕ್ಷ್ಮ ಹಾಗೂ ಉಳಿದ 19 ಮತಗಟ್ಟೆಗಳು ಸಾಮಾನ್ಯ ಎಂದು ಗುರುತಿಸಲಾಗಿದೆ ಎಂದು ತಹಸೀಲ್ದಾರ್ ತಿಮ್ಮಯ್ಯ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, ಪ್ರತಿ ಮತಗಟ್ಟೆಗೆ ನಾಲ್ಕು ಚುನಾವಣಾ ಸಿಬ್ಬಂದಿ ನಿಯೋಜಿಸಲಾಗಿದೆ. 3 ಮೊಬೈಲ್ ಸ್ಕ್ವಾಡ್‌ಗಳನ್ನು ನೇಮಿಸಲಾಗಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬಿಗಿ ಭದ್ರತೆ: ಗುರುವಾರ ನಡೆಯಲಿರುವ ಮತದಾನದ ನಿಮಿತ್ತ ಪಟ್ಟಣದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
ಮಂಗಳವಾರ ಪಟ್ಟಣಕ್ಕೆ ಆಗಮಿಸಿರುವ ಕೇಂದ್ರ ಕೈಗಾರಿಕಾ ರಕ್ಷಣಾ ಪಡೆಯ ತಂಡವನ್ನು ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ತಾವು, ಸಿಪಿಐ ಅಶೋಕ್‌ಕುಮಾರ್ ಹಾಗೂ ಪಿಎಸ್‌ಐ ಪ್ರಕಾಶ್‌ಗೌಡ ಪಾಟೀಲ್ ಸ್ವಾಗತಿಸಿದ್ದೇವೆ ಎಂದರು. ಮತದಾನ ನಿಮಿತ್ತ ಪೊಲೀಸರು ಹಾಗೂ ಗೃಹ ರಕ್ಷಕ ದಳದವರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.