ಬಳ್ಳಾರಿ

ಕರಾಳ ದಿನಾಚರಣೆ ಇಂದು

Published On :

ಹೊಸಪೇಟೆ: ಸಮಾಜದಲ್ಲಿ ನಿತ್ಯವೂ ಮಹಿಳೆಯರ ಮೇಲೆ ನಡೆಯುತ್ತಿರು ಅತ್ಯಾಚಾರ ಖಂಡಿಸಿ ಜು. 24ರಂದು ಕರಾಳ ದಿನ ಆಚರಿಸಲಾಗುವುದು ಎಂದು ಅಂತಾರಾಷ್ಟ್ರೀಯ ಮಾನವೀಯ ಸಂಘಟನೆಯ ಜಿಲ್ಲಾ ಚೇರಮನ್ ಕವಿತಾ ಈಶ್ವರ ಸಿಂಗ್ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಪ್ರತಿಯೊಬ್ಬರೂ ಮಾನವೀಯತೆಗಾಗಿ ನಡೆದುಕೊಳ್ಳೋಣ ಎಂಬ ಘೋಷ ವಾಕ್ಯದೊಂದಿಗೆ ನಗರದ ಸಿಟಿ ಗರ್ಲ್  ಪ್ರೌಢಶಾಲೆಯಿಂದ ಕಪ್ಪುಪಟ್ಟಿ ಧರಿಸಿಕೊಂಡು ಮೆರವಣಿಗೆ ನಡೆಸಲಾಗುವುದು. ನಂತರ ನಗರದ ರೋಟರಿ ವೃತ್ತದಲ್ಲಿ ಸಭೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಹೋರಾಟ ಪಕ್ಷಾತೀತವಾಗಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ವಿನಂತಿಸಿಕೊಂಡರು. ಬಹಿರಂಗ ಸಭೆಯಲ್ಲಿ ಮಹಿಳೆಯರ ಸಹಾಯವಾಣಿ ತೆರೆಯಲಿದ್ದು, ಒಂದು ಫೋನ್ ಸಂಖ್ಯೆ, ಈ ಮೇಲ್, ವಿಳಾಸ ನೀಡಿ, ನೊಂದ ಮಹಿಳೆಯರಿಗೆ ಸಾಂತ್ವನ ಹಾಗೂ ಅವರ ಮೇಲೆ ನಡೆದಿರುವ ದೌರ್ಜನ್ಯಗಳ ಬಗ್ಗೆ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು.
ನಗರಸಭೆ ಸದಸ್ಯ ಹಾಗೂ ಅಂತಾರಾಷ್ಟ್ರೀಯ ಮಾನವೀಯ ಸಂಘಟನೆಯ ತಾಲೂಕು ಅಧ್ಯಕ್ಷ ಕೆ.ಶ್ರೀಧರ ನಾಯ್ಡು, ತಾಯಮ್ಮ ಶಕ್ತಿ ಸಂಘದ ಲಲಿತ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.