ಅಸಮರ್ಪಕ ಸೇವೆಗೆ ದೂರು ನೀಡಿ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಜು. 24
ದೂರ ಸಂಪರ್ಕ ಸೇವಾ ಕಂಪನಿಗಳು (ಮೊಬೈಲ್) ಸರಿಯಾಗಿ ಸೇವೆ ನೀಡದಿದ್ದರೆ, ದೂರುಗಳ ನಿರ್ವಹಣೆಗಾಗಿ ಗ್ರಾಹಕರು ದೂರು ಕೇಂದ್ರದಲ್ಲಿ ದೂರು ನೋಂದಾಯಿಸುವಂತೆ ದೂರಸಂಪರ್ಕ ನಿಯಂತ್ರಣಾ ಪ್ರಾಧಿಕಾರ ಪ್ರಾದೇಶಿಕ ಮುಖ್ಯಸ್ಥ ಡಾ. ಸಿಬಿಚೆನ್ ಕೆ. ಮ್ಯಾಥ್ಯೂ ತಿಳಿಸಿದರು.
ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ದೂರಸಂಪರ್ಕ ನಿಯಂತ್ರಣಾ ಪ್ರಾಧಿಕಾರವು ದೂರಸಂಪರ್ಕ ಗ್ರಾಹಕರ ಹಕ್ಕು ಮತ್ತು ಸವಲತ್ತುಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ದೂರಸಂಪರ್ಕ ಗ್ರಾಹಕರ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಒಂದು ವೇಳೆ ಗ್ರಾಹಕರಿಗೆ ದೂರು ನಿವಾರಣೆ ಕುರಿತು ತೃಪ್ತಿಯಾಗದಿದ್ದರೆ ಮೇಲ್ಮನವಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಬಹುದು. ಮೇಲ್ಮನವಿ ಪ್ರಾಧಿಕಾರದ ಸಂಪರ್ಕ ವಿವರಗಳು ಸ್ಪಾರ್ಟ್ ಅಫ್ ಕಿಟ್, ಸರ್ವೀಸ್ ಪ್ರೊವೈಡರ್ರವರ ವೆಬ್ಸೈಟ್ ಹಾಗೂ ಅವರ ಮಾರಾಟ ಮಳಿಗೆಗಳಲ್ಲಿ ಲಭ್ಯವಿರುತ್ತದೆ. ಢಿಢಿಢಿ.ಡ್ಛ್ಛಿಟಡ.್ಜ್ಟಢ.್ಝಟಿ ವೆಬ್ಸೈಟ್ನಲ್ಲಿ ಗ್ರಾಹಕರ ಸಂಖ್ಯೆ, ಸಾಮಾನ್ಯ ಮಾಹಿತಿ ಸಂಖ್ಯೆ, ದೂರು ಕೇಂದ್ರದ ಸಂಖ್ಯೆ ಮತ್ತು ಮೇಲ್ಮನವಿ ಪ್ರಾಧಿಕಾರದ ವಿವರಗಳನ್ನು ಪಡೆಯಬಹುದು ಎಂದು ತಿಳಿಸಿದರು.
ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡಲು ಟ್ರಾಯ್ ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರ ನೀಡಿದರು. ಗ್ರಾಹಕರ ಹಕ್ಕು ಮತ್ತು ಸವಲತ್ತುಗಳು ಹಾಗೂ ಸೇವಾ ಸಂಸ್ಥೆಗಳು ತಮ್ಮ ಗ್ರಾಹಕರಿಗೆ ಸೇವೆಯನ್ನು ಹೇಗೆ ಪೂರೈಸಬೇಕು ಎಂಬುದರ ಬಗ್ಗೆ ವಿವರಿಸಿದರು. ಪ್ರಾಧಿಕಾರದ ಪ್ರಮುಖ ನಿಬಂಧನೆಗಳಾದ ಮೊಬೈಲ್ ನಂಬರ್ ಪೋರ್ಟೆಬಿಲಿಟಿ, ಅನಪೇಕ್ಷಿತ ವಾಣಿಜ್ಯ ಸಂದೇಶಗಳು, ದೂರು ನಿರ್ವಹಣಾ ಪ್ರಕ್ರಿಯೆ ಮುಂತಾದವುಗಳ ಬಗ್ಗೆ ವಿವರಿಸಲಾಯಿತು.
ಮೊಬೈಲ್ ಪೋರ್ಟೆಬಿಲಿಟಿ ಗ್ರಾಹಕರಿಗೆ ಅಸ್ತಿತ್ವದಲ್ಲಿರುವ ತಮ್ಮ ಸಂಖ್ಯೆಯನ್ನು ಉಳಿಸಿಕೊಂಡು ಅದೇ ಪ್ರದೇಶದಲ್ಲಿರುವ ಇನ್ನೊಂದು ಸೇವಾ ಸಂಸ್ಥೆಗೆ ಚಲಿಸುವ ಅವಕಾಶ ಒದಗಿಸುತ್ತದೆ. ಮೊಬೈಲ್ ಸಂಪರ್ಕವನ್ನು ಹೊಂದಿದ 90 ದಿನಗಳ ಬಳಿಕವಷ್ಟೇ, ಚಂದಾದಾರರಿಗೆ ಪೋರ್ಟಿಂಗ್ ಮನವಿ ಸಲ್ಲಿಸಲು ಅರ್ಹತೆ ಸಿಗುತ್ತದೆ. ಯುಪಿಸಿಯನ್ನು ಪಡೆದುಕೊಳ್ಳಲು ಕಿಕಖಖಿ ಎಂದು ಟೈಪ್ ಮಾಡಿ ಸ್ಪೇಸ್ ಕೊಟ್ಟು ಪೋರ್ಟ್ ಆಗಬೇಕಾದ 10 ಅಂಕಿಯ ನಂಬರ್ನ್ನು ಟೈಪ್ ಮಾಡಿ 1900 ಸಂಖ್ಯೆಗೆ ಎಸ್.ಎಂ.ಎಸ್. ಕಳಿಸುವುದು ಮತ್ತು ಹಾಗೆ ಪಡೆದ ಯು.ಪಿ.ಸಿ.ಗೆ 15 ದಿನಗಳ ವಾಯಿದೆ ಇರುತ್ತದೆ ಎಂದರು.
ಹಿರಿಯ ಸಂಶೋಧನಾ ಅಧಿಕಾರಿ ಲತಾ ಎಚ್.ಸಿ., ಗ್ರಾಹಕರು, ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಗ್ರಾಹಕ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

