ಸಾಮೂಹಿಕ ವಿವಾಹ
ಕುರುಗೋಡು: ಪಟ್ಟಣದ ರೈತ ಸಮುದಾಯ ಭವನದಲ್ಲಿ ಶ್ರೀ ಶರಣ ಮಡಿವಾಳ ಮಾಚಿದೇವರ ಜಯಂತ್ಯುತ್ಸವ, ಸಾಮೂಹಿಕ ವಿವಾಹ ಹಾಗೂ ಧಾರ್ಮಿಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಕರಾಮಸಂ ಸಂಘಟನೆ ಕಾರ್ಯದರ್ಶಿ ಬಿಜಾಪುರ ಎಂ. ಸಾಯಿಬಣ್ಣ, ಸಿರುಗುಪ್ಪ ಶ್ರೀ ಬಸವಭೂಷಣ ಸ್ವಾಮೀಜಿ, ಶ್ರೀ ಮಡಿವಾಳ ಮಾಚಿದೇವ ಶಿವಯೋಗಾನಂದಪುರಿ ಸ್ವಾಮೀಜಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಡೆಯೂರು ಮೂಡಲಗಿರಿಪ್ಪ, ಮಡಿವಾಳ ಮಾಚಿದೇವರ ಜೀವನ ಚರಿತ್ರೆ ಉಪನ್ಯಾಸ ನೀಡಿದರು. ಜಯಂತ್ಯುತ್ಸವ ನಿಮಿತ್ತ ಬೆಳಗ್ಗೆ ಶ್ರೀ ಶರಣ ಮಾಚಿದೇವರಿಗೆ ರುದ್ರಾಭಿಷೇಕ ಮತ್ತು ನಾನಾ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಸಾಮೂಹಿಕ ವಿವಾಹದಲ್ಲಿ 9 ಜೋಡಿ ವಧುವರರು ನವ ಜೀವನಕ್ಕೆ ಕಾಲಿರಿಸಿದರು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶ್ರೀ ಗುರುಗಳು ಮತ್ತು ಶ್ರೀ ಮಡಿವಾಳ ಮಾಚಿದೇವರ ಭಾವಚಿತ್ರ, ಸುಮಂಗಲಿಯರ ಕಳಸ, ವಧುವರರೂ, ಡೋಲು, ವೀರಗಾಸೆ ಹಾಗೂ ಮಂಗಳವಾದ್ಯಗಳೊಂದಿಗೆ ಭವ್ಯ ಮೆರವಣಿಗೆ ಜರುಗಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

