ಬೀದರ್

ರಾಷ್ಟ್ರೀಯ ಸೇವಾ ಯೋಜನೆ ಶಿಬಿರ

Published On :

ಬೀದರ್: ತಾಲೂಕಿನ ಶೀರಕಟನಹಳ್ಳಿಯಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ಜರುಗಿತು.
ಪ್ರೊ. ಬಿ.ಆರ್. ಕೊಂಡಾ ಮಾತನಾಡಿ, ಹಾಲು ಮತ್ತು ಸಕ್ಕರೆ ಈ ಭಾಗದ ರೈತರಿಗೆ ವರದಾನ ಇದ್ದ ಹಾಗೆ. ಒಟ್ಟಾರೆ ಕೃಷಿ ಉತ್ಪಾದನೆ ಹೆಚ್ಚಾದಾಗಲೇ ಬಡತನ ನೀಗುವುದು. ಆದ್ದರಿಂದ ಪ್ರತಿಯೊಬ್ಬ ರೈತರು ಕೇವಲ ಬೆಳೆ ಬೆಳೆದರೆ ಸಾಲದು. ಅದನ್ನು ಲಾಭದಾಯಕವಾಗಿಸಲು ಬೇಕಾದ ಜ್ಞಾನವಂತರಾಗುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು. ಬೀದರ ಜಿಲ್ಲೆ ಮಹಿಳಾ ಸ್ವ- ಸಹಾಯ ಸಂಘಗಳ ಚಟುವಟಿಕೆಗಳಿಗೆ ಮಾದರಿಯಾಗಿದೆ. ಈ ಮಹಿಳಾ ಸಂಘಟನೆಯ ಶಕ್ತಿಯನ್ನು ಹೈನುಗಾರಿಕೆ ಅಭಿವೃದ್ಧಿಗೆ ಬಳಕೆ ಮಾಡಬೇಕಾದ ಗುರುತರ ಜವಾಬ್ದಾರಿ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಮೇಲಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ಎಸ್ ಎಂ. ಉಸ್ತುರ್ಗೆ ಮಾತನಾಡಿ ಶಿಬಿರಾರ್ಥಿಗಳು ರಾಜ್ಯದ ಬೇರೆ ಬೇರೆ ಭಾಗಗಳಿಂದ ಬಂದು ನಮ್ಮ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದು ಸೇವಾ ಮನೋಭಾವನೆಯಿಂದ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಶಿಬಿರದ ಅವಧಿಯಲ್ಲಿ ಸಹಕರಿಸುವಂತೆ ಗ್ರಾಮಸ್ಥರನ್ನು ಕೋರಿದರು. ತಾಪಂ ಸದಸ್ಯೆ ಮಹಾದೇವಿ ಪೊಲೀಸ್ ಪಾಟೀಲ್ ಶಿಬಿರ ಉದ್ಘಾಟಿಸಿದರು.
ಗ್ರಾಪಂ ಸದಸ್ಯರಾದ ಜಗನ್ನಾಥ ಪೋಲಿಸ್ ಪಾಟೀಲ್, ಶಾರದಾಬಾಯಿ ಅತಿವಾಳ, ಚನ್ನಪ್ಪ ಕಟ್ಟೀಮನಿ, ಈಶ್ವರ ಮಚಕುರಿ ಇದ್ದರು.
ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ಡಾ. ಶ್ರೀಕಾಂತ ಕುಲಕರ್ಣಿ ಸ್ವಾಗತಿಸಿದರೆ, ಡಾ. ಚನ್ನಪ್ಪಗೌಡ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳು ಹಾಗೂ ಶಿಬಿರದ ಸಂಪೂರ್ಣ ಯೋಜನೆ ವಿವರಿಸಿದರು. ಪ್ರಕಾಶಮಣಿ ಕಾರ್ಯಕ್ರಮ ನಿರೂಪಿಸಿದರು. ಸಲೀಂ ವಂಟಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.