ಬೀದರ್

19ರಂದು ಶಿವಾಜಿ ಜಯಂತಿ ಆಚರಣೆ

Published On :

ಭಾಲ್ಕಿ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಏ.23ರಂದು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ನಿರ್ಧರಿಸಿತ್ತು. ಆದರೆ ಮಹಾರಾಷ್ಟ್ರ ಹಾಗೂ ಕೇಂದ್ರ ಸರ್ಕಾರ ಫೆ.19 ರಂದು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಸಹ ಫೆ.19 ರಂದೇ ಆಚರಿಸುವಂತೆ ಆದೇಶ ಹೊರಡಿಸಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಪ್ರಕಾಶ ಖಂಡ್ರೆ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾನು ಶಾಸಕನಾಗಿದ್ದಾಗಿನಿಂದ ಮರಾಠಾ ಸಮಾಜದ ಅಭಿವೃದ್ಧಿಗಾಗಿ ಹೋರಾಡುತ್ತಿದ್ದು, ಇಂದು ಸರ್ಕಾರ ಶಿವಾಜಿ ಮಹಾರಾಜರ ಜಯಂತಿ ಫೆ.19ರಂದು ಮಾಡಲು ನಿರ್ಧರಿಸಿದ್ದಕ್ಕೆ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಸಚಿವ ಗೋವಿಂದ ಕಾರಜೋಳ, ಸಚಿವ ಸದಾನಂದ ಗೋಡರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಮರಾಠಾ ಸಮಾಜದ ಮುಖಂಡರಾದ ದಿಗಂಬರರಾವ ಮಾನಕಾರಿ ಮಾತನಾಡಿ, ನಮ್ಮ ಮರಾಠಾ ಸಮಾಜದ ಏಳ್ಗೆಗಾಗಿ ತನು- ಮನ- ಧನದಿಂದ ಸಂಪೂರ್ಣ ಹೋರಾಟ ಮಾಡಿದ್ದಾರೆ. ಇಂದು ಶಿವಾಜಿ ಮಹಾರಾಜರ ಜಂಯತಿ ಫೆ.19ಕ್ಕೆ ಮಾಡಲು ಕರ್ನಾಟಕ ನಿರ್ಧರಿಸಿದ್ದು ಪ್ರಕಾಶ ಖಂಡ್ರೆ ಅವರ ಶ್ರಮದಿಂದಲೇ ಎಂದು ಅಭಿನಂದನೆ ಹೇಳಿದರು.
ಬಿಜೆಪಿ ತಾಲೂಕಾಧ್ಯಕ್ಷ ರಾವುಸಾಬ ಬಿರಾದಾರ, ಮಾಣಿಕರಾವ ಪಾಟೀಲ್ ಸೇರಿದಂತೆ ಮುಂತಾದವರು ಪ್ರಕಾಶ ಖಂಡ್ರೆ ಅವರಿಗೆ ಕೃತಜ್ಞತೆ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.