ಬೀದರ್

ಕೋಟಿ ಗಿಡ ಪ್ರಕ್ರಿಯೆಗೆ ಚಾಲನೆ

Published On :

ಬೀದರ್: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ರಾಜ್ಯಾದ್ಯಂತ ಒಂದು ಕೋಟಿ ಗಿಡ ನೆಡುವ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾ. ಎನ್.ಕೆ. ಪಾಟೀಲ್ ತಿಳಿಸಿದರು.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಅರಣ್ಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಜಿ.ಪಂ. ಮತ್ತು ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆವರಣದಲ್ಲಿ ಲಕ್ಷ-ವೃಕ್ಷ ವನಮಹೋತ್ಸವ ಕಾರ್ಯಕ್ರಮದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಬೆಂಗಳೂರಿನ ಯಲಹಂಕದ ಬಳಿ ಇರುವ ಭಾರತೀಯ ವಾಯುಸೇನಾ ಪ್ರದೇಶದಲ್ಲಿ 10 ಸಾವಿರ ಗಿಡಗಳನ್ನು ನೆಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು.
ಬೆಂಗಳೂರಿನ ಜಕ್ಕೂರು ಕೆರೆ ಪ್ರದೇಶದ ವ್ಯಾಪ್ತಿಯಲ್ಲಿ 3 ಸಾವಿರ ಗಿಡ, ಇದೀಗ ಜಿಲ್ಲೆಯಾದ್ಯಂತ ಒಂದೇ ದಿನದಲ್ಲಿ ಒಂದು ಲಕ್ಷ ಗಿಡ ಮರಗಳನ್ನು ನೆಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಹೈಕೋರ್ಟ್ ನ್ಯಾ. ಬಿ. ಶ್ರೀನಿವಾಸಗೌಡ ಮಾತನಾಡಿ, ಲಕ್ಷ ಗಿಡದಲ್ಲಿ ಎಷ್ಟು ಗಿಡಗಳು ಯಶಸ್ವಿಯಾಗಿ ಬೆಳೆದವು ಎನ್ನುವುದು ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಇಂದು ನೆಡಲಾದ ಗಿಡಗಳಿಗೆ ಸೂಕ್ತ ಪೋಷಣೆಯನ್ನು ಒದಗಿಸುವ ಜವಾಬ್ದಾರಿ ಅಧಿಕಾರಿಗಳಾಗಿದ್ದು ಅದನ್ನು ಸೂಕ್ತವಾಗಿ ನಿಭಾಯಿಸುವಂತೆ ತಿಳಿಸಿದರು.
ಮರದಿಂದ ಯಾರಿಗೂ ಮೋಸವಿಲ್ಲ. ಮರಗಳು ಅಂತರ್ಜಲ ಮಟ್ಟ ಹೆಚ್ಚಿಸುತ್ತವೆ. ಹಾಗಾಗಿ ಸಾರ್ವಜನಿಕರು, ರೈತರು ಹಾಗೂ ಅಧಿಕಾರಿಗಳು ಸಂರಕ್ಷಿಸಬೇಕು. ಪ್ರತಿಯೊಬ್ಬರು ಮನೆಯ ಮುಂದೆ ಗಿಡವನ್ನು ನೆಡಬೇಕು ಎಂದರು.
ರಾಜ್ಯ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಅಶೋಕ ಬಿ.ನಿಜಗಣ್ಣವರ್, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾ. ಹಂಚಾಟೆ ಸಂಜೀವಕುಮಾರ, ಜಿಲ್ಲಾಧಿಕಾರಿ ಡಾ. ಪಿ.ಸಿ. ಜಾಫರ್, ಎಸ್ಪಿ ಸುಧೀರಕುಮಾರರೆಡ್ಡಿ, ಜಿಪಂ ಸಿಇಒ ಉಜ್ವಲ್‌ಕುಮಾರ್ ಘೋಷ್ ಹಾಗೂ ಜಿಲ್ಲಾ ಅರಣ್ಯ ಉಪ ಸಂರಕ್ಷಣಾಧಿಕಾರಿ ಸುನೀಲ್ ಪನ್ವಾರ್ ಇದ್ದರು. ಹೆಚ್ಚುವರಿ ವರಿಷ್ಠಾಧಿಕಾರಿ ಜಿ. ಸಂಗೀತಾ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.