ಬೀದರ್

ನೂತನ ವಿದ್ಯಾರ್ಥಿಗಳಿಗೆ ಸ್ವಾಗತ

Published On :

ಬೀದರ್: ನಗರದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದಲ್ಲಿ ಶನಿವಾರ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪಡೆದ ಬಿ.ಎ., ಬಿ.ಕಾಂ. ಹಾಗೂ ಬಿ.ಎಸ್ಸಿ. ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ಸ್ವಾಗತ ಹಾಗೂ ಪುನಶ್ಚೇತನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಪರಿಚಯ ಹಾಗೂ ಮಹಾವಿದ್ಯಾಲಯದ ಸ್ಥಾಪನೆಗಾಗಿ ಹಗಲಿರುಳು ಶ್ರಮಿಸಿರುವ ಲಿಂ. ಪೂಜ್ಯ ಡಾ. ಚನ್ನಬಸವ ಪಟ್ಟದೇವರು ಹಾಗೂ ಮಾಜಿ ಸಚಿವ ಡಾ. ಭೀಮಣ್ಣಾ ಖಂಡ್ರೆ ಅವರ ಹಾಗೂ ಇಂದಿನ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಶಾಸಕರಾದ ಈಶ್ವರ ಖಂಡ್ರೆ ಅವರ ಪರಿಚಯ ಮಾಡಿಕೊಡಲಾಯಿತು. ಗ್ರಂಥಾಲಯದಲ್ಲಿನ ಪುಸ್ತಕಗಳ ಮಾಹಿತಿ, ಎನ್.ಎಸ್.ಎಸ್. ಹಾಗೂ ಕ್ರೀಡಾ ವಿಭಾಗದಿಂದಾಗುವ ಲಾಭಗಳ ಮಾಹಿತಿ, ವಿದ್ಯಾರ್ಥಿ ಒಕ್ಕೂಟದ ಕಾರ್ಯಚಟುವಟಿಕೆಗಳು, ಸಾಂಸ್ಕೃತಿಕ ಚಟುವಟಿಕೆಗಳು ನಡೆಸುವುದರೊಂದಿಗೆ ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಗೆ ಸಹಾಯವಾಗುವ ಶೈಕ್ಷಣಿಕ ವಿದ್ಯಾರ್ಥಿ ವೇತನ, ಹಿಂದಿನ ಪರೀಕ್ಷಾ ಫಲಿತಾಂಶದ ಮಾಹಿತಿಯನ್ನು ಪ್ರಾಚಾರ್ಯರಾದ ಪ್ರೊ. ಶಿವನಾಥ ಪಾಟೀಲ್ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.