ಸಣ್ಣ ಕಥೆಗಳ ಆಹ್ವಾನ
ಶಹಾಪುರ: ಬೀದರ್: ದಿ. ಜಯತೀರ್ಥ ರಾಜಪುರೋಹಿತ ಸ್ಮಾರಕ ರಾಜ್ಯಮಟ್ಟದ ಕನ್ನಡ ಕಥಾ ಸ್ಪರ್ಧೆಗೆ ಗುಲ್ಬರ್ಗ ವಿಶ್ವವಿದ್ಯಾಲಯವು ಸಣ್ಣ ಕಥೆಗಳನ್ನು ಆಹ್ವಾನಿಸಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಕಥೆಗಾರರು ತಾವು ಬರೆದ ಕಥೆಯ(ನಾಲ್ಕು) ಪ್ರತಿಗಳನ್ನು ಆ.20 ರೊಳಗೆ ನಿರ್ದೇಶಕರು, ಪ್ರಸಾರಾಂಗ, ಗುಲ್ಬರ್ಗ ವಿಶ್ವವಿದ್ಯಾಲಯ, ಗುಲ್ಬರ್ಗ-585 106 ಈ ವಿಳಾಸಕ್ಕೆ ಕಳುಹಿಸಬೇಕು. ಕಥಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿದ ಕಥೆಗೆ ದಿ. ಜಯತೀರ್ಥ ರಾಜಪುರೋಹಿತ ಸ್ಮಾರಕವಾಗಿ 2 ಸಾವಿರ ನಗದು ಹಣ ಮತ್ತು ಒಂದು ಚಿನ್ನದ ಪದಕ ನೀಡಲಾಗುವುದು. ಕಥೆಯು ಕನ್ನಡ ಭಾಷೆಯಲ್ಲಿರಬೇಕು. ಸ್ವಂತ ಕಥೆಯಾಗಿರಬೇಕು. ಈ ಮೊದಲು ಎಲ್ಲಿಯೂ ಪ್ರಕಟವಾಗಿರಕೂಡದು. ತಮ್ಮ ಕಿರು ಪರಿಚಯ ದೃಢೀಕರಿಸಬೇಕು ಎಂದು ಗುಲ್ಬರ್ಗ ವಿವಿ ಕುಲಸಚಿವರು ತಿಳಿಸಿದ್ದಾರೆ.
ಕನ್ನಡ ಕೃತಿಗಳಿಗೆ ಗೌರವಧನ
ಬೀದರ್: ಗುಲ್ಬರ್ಗ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಹೊಂದಿಕೊಂಡಂತೆ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳ ಕನ್ನಡ ಲೇಖಕರ ಕೃತಿಗೆ ಗೌರವಧನ ನೀಡುವುದಕ್ಕೆ ಗುಲ್ಬರ್ಗ ವಿಶ್ವವಿದ್ಯಾಲಯ ಕೃತಿಗಳನ್ನು ಆಹ್ವಾನಿಸಿದೆ. ಪ್ರತಿ ಕೃತಿಗೆ 5 ಸಾವಿರ ಗೌರವಧನ ಹಾಗೂ ಪ್ರಶಸ್ತಿ ನೀಡಲಾಗುವುದು. ಪುಸ್ತಕದ 4 ಪ್ರತಿಗಳನ್ನು ಆ.20ರೊಳಗೆ ನಿರ್ದೇಶಕರು ಪ್ರಸಾರಾಂಗ, ಗುಲ್ಬರ್ಗ ವಿಶ್ವವಿದ್ಯಾಲಯ, ಗುಲ್ಬರ್ಗ- 585 106 ವಿಳಾಸಕ್ಕೆ ಕಳುಹಿಸಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

