ಇಂದು ಜಿಲ್ಲಾ ಮಟ್ಟದ ಯುವಜನ ಮೇಳ
ಬಸವನಬಾಗೇವಾಡಿ: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಇಲ್ಲಿನ ವಿರಕ್ತಮಠದ ಆವರಣದಲ್ಲಿ ಜ. 24ರಂದು ಹಮ್ಮಿಕೊಂಡಿದೆ ಎಂದು ಯುವಜನ ಮೇಳದ ಉಸ್ತುವಾರಿ ಅರವಿಂದ ಕೊಪ್ಪ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 8.30ಕ್ಕೆ ಸ್ವಾಮಿ ವಿವೇಕಾನಂದರ ಭಾವಚಿತ್ರದ ಮೆರವಣಿಗೆಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಶಿವಾನಂದ ಕಲ್ಲೂರ ಚಾಲನೆ ನೀಡುವರು. ಜಿಪಂ ಸದಸ್ಯ ಚಂದ್ರಶೇಖರ ಪಾಟೀಲ, ಈರಣ್ಣ ಪಟ್ಟಣಶೆಟ್ಟಿ, ಸಂಗಮೇಶ ಓಲೇಕಾರ, ಶಿವನಗೌಡ ಬಿರಾದಾರ ಭಾಗವಹಿಸುವರು. ಬೆಳಗ್ಗೆ 10ಗಂಟೆಗೆ ಸ್ವಾಮಿ ವಿವೇಕಾನಂದರ ಜೀವನ ಸಂದೇಶ ಸಾರುವ ಚಿತ್ರ ಪ್ರದರ್ಶನವನ್ನು ಕೃಷ್ಣಾ ಕಾಡಾ ಅಧ್ಯಕ್ಷ ಬಸವರಾಜ ಕುಂಬಾರ ಉದ್ಘಾಟಿಸುವರು. ಜಿಪಂ ಸದಸ್ಯ ಶಿವಾನಂದ ಅವಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮೇಳ ಉದ್ಘಾಟಿಸಲಿದ್ದಾರೆ. ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಿದ್ದಲಿಂಗದೇವರು ಸಾನ್ನಿಧ್ಯ ವಹಿಸುವರು. ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಜಿಪಂ ಅಧ್ಯಕ್ಷೆ ಕಾವ್ಯ ದೇಸಾಯಿ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಸಿ.ಎಸ್. ನಾಡಗೌಡ, ಎಂ.ಬಿ. ಪಾಟೀಲ, ಅಪ್ಪಾಸಾಹೇಬ ಪಟ್ಟಣಶೆಟ್ಟಿ, ವಿಠಲ ಕಟಕದೊಂಡ, ಡಾ. ಸಾರ್ವಭೌಮ ಬಗಲಿ, ರಮೇಶ ಭೂಸನೂರ, ಜಿ.ಎಸ್. ನ್ಯಾಮಗೌಡ, ಮಹಾಂತೇಶ ಕೌಜಲಗಿ, ಅರುಣ ಶಹಾಪೂರ ಇತರರು ಆಗಮಿಸುವರು ಎಂದರು. ಸಂಜೆ 6 ಗಂಟೆಗೆ ಮುಕ್ತಾಯ ಸಮಾರಂಭ ನಡೆಯಲಿದೆ. ಮಾಜಿ ಶಾಸಕ ಶಿವಾನಂದ ಪಾಟೀಲ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು. ಪುರಸಭೆ ಮುಖ್ಯಾಧಿಕಾರಿ ಅರವಿಂದ ಜಮಖಂಡಿ, ರಮಜಾನ ಮುಜಾವರ, ಡಾ. ಜಗದೀಶ ಮಠ ಅವಣ್ಣ ಬ್ಯಾಲ್ಯಾಳ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

