ರಸ್ತೆ ಕಾಮಗಾರಿಗೆ ಭೂಮಿ ಪೂಜೆ
ಬಿಜಾಪುರ: ಐತಿಹಾಸಿಕ ನಗರ ಬಿಜಾಪುರದಲ್ಲಿ ಫೆ. 9, 10, 11ರಂದು ನಡೆಯಲಿರುವ 79ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಗರೋತ್ಥಾನ ಯೋಜನೆಯಡಿ ಬಿಜಾಪುರ ನಗರದ ಇಬ್ರಾಹಿಂಪೂರದ ಗುರುಪಾದೇಶ್ವರ ಕಾಲನಿ, ಕೆ.ಕೆ. ಕಾಲನಿ ರಸ್ತೆ ಡಾಂಬರೀಕರಣ ಹಾಗೂ ಸಿಸಿ ರಸ್ತೆ ನಿರ್ಮಾಣಕ್ಕೆ ಗುರುವಾರ ಶಾಸಕ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಬ್ರಾಹಿಂಪುರ ರಸ್ತೆಯನ್ನು ರು. 48 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಅದೇ ರೀತಿ ನಗರದ ವಿವಿಧ ರಸ್ತೆಗಳ ಡಾಂಬರೀಕರಣ ತ್ವರಿತವಾಗಿ ಕೈಗೊಂಡು ಸಮ್ಮೇಳನಕ್ಕೆ ಸುಂದರ ರಸ್ತೆಗಳ ನಿರ್ಮಾಣಕ್ಕೆ ಯುದ್ದೋಪಾದಿಯಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸಾಹಿತ್ಯ ಸಮ್ಮೇಳನಕ್ಕೆ ನಗರದ ರಸ್ತೆಗಳು ಸಿದ್ಧಗೊಳಿಸಲು ಈಗಾಗಲೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಚನ್ನಬಸಪ್ಪ ಬಜಂತ್ರಿ, ಪೌರಾಯುಕ್ತ ಎಸ್.ಜಿ. ರಾಜಶೇಖರ, ಸಹಾಯಕ ಕಾರ್ಯಪಾಲಕ ಅಭಿಯಂತರ ರಾಜು ಹೇರಲಗಿ, ಶ್ರೀಧರ ಹಳ್ಳಿ, ರಮೇಶ ಕೌಲಗಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

