ಬಿಜಾಪುರ

ಗಡಿನಾಡ ಕನ್ನಡಿಗರ ಮರೆತ ಸಮ್ಮೇಳನ

Published On :




ಬಿಜಾಪುರ: ನಗರದಲ್ಲಿ ಜರುಗುತ್ತಿರುವ 79ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಹಾರಾಷ್ಟ್ರದ ಗಡಿನಾಡು ಕನ್ನಡ ಹೋರಾಟಗಾರರು ತೀವ್ರವಾಗಿ ವಿರೋಧಿಸಿದ್ದಾರೆ.
  ಗಡಿಕನ್ನಡ ಹೋರಾಟಗಾರ ಸಂಗಪ್ಪಣ್ಣ ಕಾರಾಜನಗಿ ಅವರು ಸೇರಿದಂತೆ ಅನೇಕರು ಸಮ್ಮೇಳನದ ವಿರುದ್ಧ ಕಿಡಿ ಕಾರಿದ್ದಾರೆ. ಬಿಜಾಪುರದಲ್ಲಿ ಜರುಗುತ್ತಿರುವ ಸಾಹಿತ್ಯ ಸಮ್ಮೇಳನದಲ್ಲಿ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಗಡಿ ಭಾಗದ ಕನ್ನಡ ಹೋರಾಟಗಾರರು, ಸಾಹಿತಿಗಳು, ಕವಿಗಳನ್ನು ಕಡೆಗಣಿಸಿರುವುದು ನೋವಿನ ಸಂಗತಿ. ಗಡಿನಾಡ ಕನ್ನಡಿಗರ ಸಮಸ್ಯೆಗಳ ಕುರಿತು ಸಮ್ಮೇಳನದಲ್ಲಿ ಮಾತನಾಡಲು ಅವಕಾಶ ಮತ್ತು ಗಡಿನಾಡ ಗೋಷ್ಠಿ ನಡೆಸುವಂತೆ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷಪುಂಡಲೀಕ ಹಾಲಂಬಿ ಹಾಗೂ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಅವರಿಗೆ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ. ಸಾಹಿತ್ಯ ಸಮ್ಮೇಳನದಲ್ಲಿ ಗಡಿನಾಡು ಕನ್ನಡಿಗರಿಗೆ ಅವಕಾಶ ನೀಡದೆ ಇರುವುದು ದುರದೃಷ್ಟಕರ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.