ಚಾಮರಾಜನಗರ

ಸರ್ಕಾರದ ಜೊತೆ ಜನತೆ ಕೈಜೋಡಿಸಬೇಕು

Published On :

ಕೊಳ್ಳೇಗಾಲ: ಸರ್ಕಾರದ ಜೊತೆ ಸಾರ್ವಜನಿಕರು, ಸಂಘಸಂಸ್ಥೆಗಳು ಕೈ ಜೋಡಿಸಿದರೆ ಎಲ್ಲ ಕೆಲಸವೂ ಸುಲಭ ಎಂದು ಗೃಹ ಹಾಗೂ ಸಾರಿಗೆ ಸಚಿವರ ಆಪ್ತ ಕಾರ್ಯದರ್ಶಿ ಕೆ.ಅಮರ ನಾರಾಯಣ ಹೇಳಿದರು.
ನಗರದ ಇತಿಹಾಸ ಪ್ರಸಿದ್ಧ ಚಂದ್ರಪುಷ್ಕರಣಿ ಈಶ್ವರನ ಕೊಳವನ್ನು ಸ್ವಚ್ಛಗೊಳಿಸುವ ಸಂಬಂಧ ಶ್ರಮದಾನ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಕಾರ್ಯಕ್ಕೂ ಹಿಂಜರಿಯದೇ ಧೈರ್ಯದಿಂದ ಭಾಗವಹಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಇದಕ್ಕೆ ಜನಪ್ರತಿನಿಧಿಗಳು, ಸಾರ್ವಜನಿಕರ ಸಹಕಾರ ಅಗತ್ಯ ಎಂದರು. ಶ್ರಮದಾನದಲ್ಲಿ ಸರ್ಕಾರಿ ಮಹದೇಶ್ವರ ಕಾಲೇಜು, ಮಾನಸ ಶಿಕ್ಷಣ ಸಂಸ್ಥೆ ಹಾಗೂ ಎಂಜಿಎಸ್‌ವಿ ಸರ್ಕಾರಿ  ಕಾಲೇಜಿನ ಮುನ್ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ಪಾಲ್ಗೊಂಡಿದ್ದರು. ಜೊತೆಗೆ ಶಾಸಕ ಜಿ.ಎನ್. ನಂಜುಂಡಸ್ವಾಮಿ, ಅಮರನಾರಾಯಣ ಸೇರಿದಂತೆ ಗಣ್ಯರು ಸಾಥ್ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ತಹಸೀಲ್ದಾರ್ ನಂಜುಂಡಯ್ಯ, ಸುರೇಶ್ ಕುಮಾರ್, ನಗರಸಭಾಧ್ಯಕ್ಷೆ ಮಂಗಳಗೌರಿ, ಪೌರಾಯುಕ್ತ  ಬಸವರಾಜು, ಕಂದಾಯ ಇಲಾಖೆ, ನಗರಸಭೆ ಸಿಬ್ಬಂದಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.