ಅಪಘಾತ: ಇಬ್ಬರ ಕಾಲು ಮುರಿತ
ಗುಂಡ್ಲುಪೇಟೆ: ಬೈಕ್ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸೇರಿ ಇಬ್ಬರಿಗೆ ಕಾಲು ಮುರಿದ ಘಟನೆ ತಾಲೂಕಿನ ಬೆಳಚಲವಾಡಿ ಗೇಟ್ ಬಳಿ ನಡೆದಿದೆ.
ಬೇಗೂರಿನಲ್ಲಿ ಪ್ಲೇವುಡ್ ಶಾಪ್ನ ಮಾಲೀಕ ರವಿ ಆಚಾರ್ ಹಾಗೂ ಮುದ್ದುಶೆಟ್ಟಿ ಎಂಬವರು ಗಾಯಾಳುಗಳು. ಆಟೋವನ್ನು ಬೇಗೂರು ಉಪ-ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
ಬಸ್- ಟೆಂಪೋ ಡಿಕ್ಕಿ: ಗಾಯ
ಚಾಮರಾಜನಗರ: ಬಸ್ಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ತೀವ್ರ ಗಾಯಗೊಂಡಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಚಾಮರಾಜನಗರದಿಂದ ಹೊರಟ ಬಸ್ಗೆ ಗುಂಡ್ಲುಪೇಟೆ ರಸ್ತೆಯಲ್ಲಿ ವೇಗವಾಗಿ ಬಂದ ಟೆಂಪೋ ಡಿಕ್ಕಿ ಹೊಡೆದು, ಕೇರಳ ಮೂಲದ ಟೆಂಪೋ ಚಾಲಕ ನಯಾಜ್(35) ತೀವ್ರ ಗಾಯಗೊಂಡಿದ್ದಾನೆ. ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ಕಾರ್ಯಾಗಾರ
ಚಾಮರಾಜನಗರ: ನಗರದ ಜಿಲ್ಲಾಡಳಿತ ಭವನದ ಕೆಡಿಪಿ ಸಭಾಂಗಣದಲ್ಲಿ ಫೆ.7ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಮಾನವ ಅಭಿವೃದ್ಧಿ ವರದಿ ತಯಾರಿಕೆ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಚಾಮರಾಜನಗರ: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಾಗರಿಕ ಬಂದೂಕು ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಜಿಲ್ಲಾ ಪೊಲೀಸ್ ಸಶಸ್ತ್ರ ಮೀಸಲು ಪಡೆಯ ರಿಸರ್ವ್ ಪೊಲೀಸ್ ಇನ್ಸ್ಪೆಕ್ಟರ್ರಿಂದ ಪಡೆದು, 400 ಪ್ರವೇಶ ಶುಲ್ಕ ಹಾಗೂ ಸಂಬಂಧಿಸಿದ ದಾಖಲಾತಿಗಳ ಜೆರಾಕ್ಸ್ ಪ್ರತಿಯನ್ನು ದೃಢೀಕರಿಸಿ ಅರ್ಜಿ ಸಲ್ಲಿಸಬೇಕೆಂದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮ ಸ್ವರಾಜ್ಯ ಕೇಂದ್ರ ಉದ್ಘಾಟನೆ
ಚಾಮರಾಜನಗರ: ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ವತಿಯಿಂದ ವಿಶ್ವ ರೈತ ಚೇತನ ಪ್ರೊ. ಎಂ.ಡಿ.ನಂಜುಂಡಸ್ವಾಮಿ ಅವರ 77ನೇ ಜನ್ಮದಿನದ ಅಂಗವಾಗಿ ತಾಲೂಕಿನ ಹೊಂಡರಬಾಳು ಅಮೃತಭೂಮಿಯ ಅಂತಾರಾಷ್ಟ್ರೀಯ ಸುಸ್ಥಿರ ಅಭಿವೃದ್ಧಿ ಕೇಂದ್ರದಲ್ಲಿ ಫೆ.13ರಂದು ಬೆಳಗ್ಗೆ 11 ಗಂಟೆಗೆ ರೈತೋತ್ಸವ ಹಾಗೂ ಗ್ರಾಮ ಸ್ವರಾಜ್ಯ ಕೇಂದ್ರದ ಉದ್ಘಾಟನೆ ಹಮ್ಮಿಕೊಳ್ಳಲಾಗಿದೆ.ಫೆ.13ರಿಂದ 16ರವರೆಗೆ ಕಾರ್ಯಕ್ರಮ ಜರುಗಲಿದ್ದು, ಹಿರಿಯ ಸಾಹಿತಿ, ದೇವನೂರು ಮಹಾದೇವ ಹಾಗೂ ಕೇರಳ ರಾಜ್ಯದ ಆದಿವಾಸಿ ಚಳವಳಿಯ ರೂವಾರಿ ಸಿ.ಕೆ.ಜಾನ್ ಕೇಂದ್ರದ ಉದ್ಘಾಟನೆ ನೆರವೇರಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

