ಚಾಮರಾಜನಗರ

'ವ್ಯಾಪಾರಿಗಳು ಸಂಘಟಿತರಾಗಬೇಕು'

Published On :




ಹುಣಸೂರು: ಅಸಂಘಟಿತ ವ್ಯಾಪಾರಿಗಳು ಸಂಘಟಿತರಾಗುವುದರಿಂದ ಸರ್ಕಾರದಿಂದ ಸಿಗುವ ಅನೇಕ ಸವಲತ್ತುಗಳನ್ನು ಸರಿಯಾದ ರೀತಿಯಲ್ಲಿ ಪಡೆದುಕೊಳ್ಳಲು ಸಾಧ್ಯವೆಂದು ಜಿಟಿಡಿ ಫೌಂಡೇಶನ್ ಅಧ್ಯಕ್ಷ ಜಿ.ಟಿ. ಹರೀಶ್ಗೌಡ ಅಭಿಪ್ರಾಯಪಟ್ಟರು.  ತಾಲೂಕಿನ ಹನಗೋಡಿನ ರಸ್ತೆಬದಿ ವ್ಯಾಪಾರಿಗಳ ಸಂಘವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯವರಾದ ರಸ್ತೆಬದಿ ವ್ಯಾಪಾರಿಗಳು ಸರ್ಕಾರದಿಂದ ಸಿಗುತ್ತಿರುವ ಅನೇಕ ಸೌಲಭ್ಯಗಳಿಂದ ವಂಚಿತರಾಗಿದ್ದು, ಇದು ಉಳ್ಳವರ ಪಾಲಾಗುತ್ತಿದೆ. ಇದರಿಂದ ನೀವುಗಳು ಸಂಘಟಿತರಾಗುವುದರೊಂದಿಗೆ ತಮ್ಮ ಫೌಂಡೇಷನ್ ವತಿಯಿಂದ ಆರೋಗ್ಯ, ಶಿಕ್ಷಣ ನೈರ್ಮಲ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಹೇಳಿದರು.
ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ಲಲಿತಾ ದೇವೇಗೌಡ ಮಾತನಾಡಿ, ತಾವು ಹನಗೋಡು ಜಿಪಂ ಕ್ಷೇತ್ರದಲ್ಲಿ ಜನರು ನಿರೀಕ್ಷೆ ಇಟ್ಟು ಮತ ನೀಡಿ ಚುನಾಯಿಸಿದ ಬಳಿಕ ಹಂತ ಹಂತವಾಗಿ ಶಿಕ್ಷಣ, ಆರೋಗ್ಯ ಹಾಗೂ ಗ್ರಾಮ ಪರಿಮಿತಿ ರಸ್ತೆ ಸೇರಿದಂತೆ ಸರ್ಕಾರದಿಂದ ಹೆಚ್ಚಿನ ಅನುದಾನ ತರುವ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದೇನೆ ಎಂದು ತಿಳಿಸಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜ್, ಸದಸ್ಯ ರವಿಗೌಡ, ತಾಪಂ ಸದಸ್ಯರಾದ ಎಚ್.ಆರ್. ರಮೇಶ್, ಕೆ. ಗಣಪತಿ, ಗ್ರಾಪಂ ಅಧ್ಯಕ್ಷ ಶಿವಕುಮಾರ್, ಮಾಜಿ ಅಧ್ಯಕ್ಷ ದಾ.ರಾ. ಮಹೇಶ್, ವೀರಭದ್ರಪ್ಪ ಸಮಿತಿಯ ಏಣಿಮಾದೇವ, ಅಸ್ಲಂ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.