ಚಾಮರಾಜನಗರ

ನವೋದಯ ಶಾಲೆ ಪ್ರವೇಶ ಪರೀಕ್ಷೆ

Published On :

ಚಾಮರಾಜನಗರ: ನವೋದಯ ಶಾಲೆ ಪ್ರವೇಶಕ್ಕಾಗಿ ಐದನೇ ತರಗತಿ ವಿದ್ಯಾರ್ಥಿಗಳಿಗೆ ಭಾನುವಾರ ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಸಲಾಯಿತು.
ಜಿಲ್ಲೆಯಿಂದ 3089 ವಿದ್ಯಾರ್ಥಿಗಳು ಪ್ರವೇಶ ಬಯಸಿದ್ದಾರೆ. ತಾಲೂಕಿನಲ್ಲಿ ಪಪೂ ಬಾಲಕರ ಹಾಗೂ ಬಾಲಕಿಯ ಕಾಲೇಜು, ಸಿ.ಆರ್. ಬಾಲರಪಟ್ಟಣ ಪ್ರೌಢಶಾಲೆ, ಗುಂಡ್ಲುಪೇಟೆ ತಾಲೂಕಿನಲ್ಲಿ 3 ಕೇಂದ್ರ, ಕೊಳ್ಳೇಗಾಲ ತಾಲೂಕಿವಲ್ಲಿ 2, ಯಳಂದೂರು ಹಾಗೂ ಹನೂರಿನಲ್ಲಿ ತಲಾ ಒಂದು ಕೇಂದ್ರಗಳನ್ನು ತೆರೆಯಲಾಗಿದೆ ಎಂದು  ಪ್ರಾಂಶುಪಾಲ ಡೇನಿಯಲ್ ತಿಳಿಸಿದರು. ಎಲ್ಲಾ ಕೇಂದ್ರಗಳಿಗೂ ಖುದ್ದು ಭೇಟಿ ನೀಡಿ  ಪರಿಶೀಲನೆ ನಡೆಸಲಾಯಿತು. ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ರಾಚಯ್ಯ, ಆದರ್ಶ ಶಾಲೆಯ ಮುಖ್ಯ ಶಿಕ್ಷಕ ನಿಂಗೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.