ಚಾಮರಾಜನಗರ

ಶವ ಪರೀಕ್ಷೆಯನ್ನೂ ಬಾಧಿಸಿದ ಮುಷ್ಕರ

Published On :

ಕೊಳ್ಳೇಗಾಲ:  ಟಿಟಿ ಹಾಗೂ ಟೆಂಪೊ ಟ್ರಾವೆಲ್ ಡಿಕ್ಕಿಯಾಗಿ ಮೃತಪಟ್ಟ ವ್ಯಕ್ತಿಯೊಬ್ಬರ ಶವ ಮರಣೋತ್ತರ ಪರೀಕ್ಷೆಗೂ ವೈದ್ಯರ ಮುಷ್ಕರದ ಬಿಸಿ ತಟ್ಟಿದೆ.
ಭಾನುವಾರ ಸಂಜೆ ಮಹದೇಶ್ವರಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ ಆಗಮಿಸುತ್ತಿದ್ದ ಗುಂಬಳ್ಳಿಯ ವಾಸಿ ಸಿದ್ದಯ್ಯ ಅಲಿಯಾಸ್ ನಿಂಗ ಅವರು ಮಂಗಲ ಗ್ರಾಮ ಸಮೀಪ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವಿಗೀಡಾಗಿ  20 ಮಂದಿ ಗಾಯಗೊಂಡಿದ್ದರು.
ಈ ಸಂಬಂಧ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಶವವನ್ನು ಹನೂರು ಶವಾಗಾರದಲ್ಲಿ ಇರಿಸಲಾಗಿತ್ತು.
ಸೋಮವಾರ ಬೆಳಗ್ಗಿನಿಂದಲೂ ಶವ ಮರಣೋತ್ತರ ಪರೀಕ್ಷೆಗಾಗಿ ಮೃತಪಟ್ಟ ವ್ಯಕ್ತಿಯ ಬಂಧುಗಳು ಕಾದು ಕುಳಿತಿದ್ದರು. ಆದರೆ, ವೈದ್ಯರ ಮುಷ್ಕರದಿಂದ ಅವರಿಗೆ ಸಮಸ್ಯೆಯಾಯಿತು. ಸಕಾಲದಲ್ಲಿ ವೃತ್ತ ನಿರೀಕ್ಷಕರು ಹಾಗೂ ಪೊಲೀಸ್ ಸಿಬ್ಬಂದಿ ಸಹಕಾರದೊಂದಿಗೆ ಮಧ್ಯಾಹ್ನ ಎರಡೂವರೆ ಗಂಟೆ ವೇಳೆಯಲ್ಲಿ ಖಾಸಗಿ ವಾಹನವೊಂದರಲ್ಲಿ ಮೈಸೂರು ಕೆ.ಆರ್.ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಸಾಗಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.