ಮನಸೂರೆಗೊಂಡ ಸಾಮೂಹಿಕ ಸೂರ್ಯ ನಮನ
ಚಾಮರಾಜನಗರ: ಮನುಷ್ಯನ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಯೋಗಾಭ್ಯಾಸ ಅತ್ಯಂತ ಅವಶ್ಯಕ ಎಂದು ನ್ಯಾಯಮೂರ್ತಿ ಕೆ.ಎಚ್.ಮಲ್ಲಪ್ಪ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಯೋಗ ಒಕ್ಕೂಟದ ವತಿಯಿಂದ, ರಥಸಪ್ತಮಿ ಹಾಗೂ ಸ್ವಾಮಿ ವಿವೇಕಾನಂದರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ನಡೆದ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಾಚೀನ ಭಾರತೀಯ ಸಂಸ್ಕೃತಿಯಲ್ಲಿ ಯೋಗಕ್ಕೆ ಮಹತ್ತರ ಸ್ಥಾನವಿದ್ದು, ಯೋಗ ಮನುಷ್ಯರ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಅವರನ್ನು ಸಂಯಮಶೀಲರನ್ನಾಗಿ ಮಾಡುತ್ತದೆ. ಇದರಿಂದ ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗದಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಲು ಸಹಕಾರಿಯಾಗುತ್ತದೆ ಎಂದರು.
ಸ್ವಾಮಿ ವಿವೇಕಾನಂದರ 150ನೇ ಜನ್ಮ ದಿನಾಚರಣೆ ಹಾಗೂ ರಥಸಪ್ತಮಿ ಅಂಗವಾಗಿ ಜಿಲ್ಲಾ ಯೋಗ ಒಕ್ಕೂಟದ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು ಅರ್ಥಪೂರ್ಣ. ಇದು ನಿರಂತರವಾಗಿ ನಡೆಯಬೇಕಿದೆ. ಇದರಿಂದ ಸದೃಢ ಭಾರತ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಚಂದ್ರಕಾಂತ್ ಭಜಂತ್ರಿ ಮಾತನಾಡಿ, ಯೋಗವು ಮಾನವನ ಆರೋಗ್ಯ ಕಾಪಾಡುವ ಜೊತೆಗೆ ಜ್ಞಾನವನ್ನು ಗ್ರಹಿಸುವ ಶಕ್ತಿ ಹೆಚ್ಚಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಇದು ನಿರಂತರವಾಗಿ ನಡೆಯಬೇಕು. ಇಂಥ ಕಾರ್ಯಕ್ರಮಗಳು ಜನರಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲಿವೆ ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಅಧ್ಯಕ್ಷ ಎಚ್.ಜಿ.ಕುಮಾರಸ್ವಾಮಿ ಮಾತನಾಡಿ, ಪತಂಜಲಿ ಯೋಗ ಶಿಕ್ಷಣದ ವತಿಯಿಂದ ಜಿಲ್ಲೆಯಲ್ಲಿ ಉಚಿತ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ಬಗ್ಗೆ ತರಬೇತಿ ಶಿಬಿರ ನಡೆಸಲಾಗುತ್ತಿದ್ದು, ಮುಂದಿನ ದಿನಗಳಲ್ಲೂ ಇದನ್ನು ಮುಂದುವರಿಸಿಕೊಂಡು ಹೋಗಲಾಗುತ್ತದೆ ಎಂದರು.
ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ನಗರದ ಎಲ್ಲ ಶಾಲೆಗಳಿಂದ 800 ಮಕ್ಕಳು ಭಾಗವಹಿಸಿದ್ದು, 108 ಸೂರ್ಯ ನಮಸ್ಕಾರ ಮಾಡಿದರು.
ಜಿಲ್ಲಾ ಯೋಗ ಒಕ್ಕೂಟದ ಎಚ್.ಎಸ್. ಪಶುಪತಿ, ಸೇವಾ ಭಾರತಿ ಶಿಕ್ಷಣ ಸಂಸ್ಥೆಯ ಸುಬ್ರಹ್ಮಣ್ಯಂ, ಪ್ರಕಾಶ್, ಹೊನ್ನಪ್ಪ, ನಿಜಗುಣ ಗುರುಸ್ವಾಮಿ, ಜಿಲ್ಲಾ ಯೋಗ ಒಕ್ಕೂಟದ ಕಾರ್ಯಾಧ್ಯಕ್ಷ ಬಿ.ಪಿ. ಪ್ರಕಾಶ್, ವಿಎಚ್ಪಿ ಶಾಲೆಯ ಮುಖ್ಯೋಪಾಧ್ಯಾಯ ಶ್ರೀನಿವಾಸ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

