ಯಳಂದೂರಲ್ಲಿ ಬಿರುಸಾದ ಚುನಾವಣಾ ಚಟುವಟಿಕೆ
ಯಳಂದೂರು: ಸ್ಥಳೀಯ ಸಂಸ್ಥೆ ಚುನಾವಣೆ ಸಂಬಂಧ ಪಪಂ ಚುನಾವಣೆಗೆ ಉತ್ತಮ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ವಿವಿಧ ಪಕ್ಷಗಳಿಂದ ಬಿರುಸಿನ ತಯಾರಿ ನಡೆಯುತ್ತಿದೆ. ಯಳಂದೂರು ಪಪಂನ 11 ವಾರ್ಡ್ಗಳಲ್ಲಿ 6 ಸಾವಿರ ಮಂದಿ ಮತದಾರರು ಇದ್ದಾರೆ.
ಕಳೆದ ಬಾರಿ ಕಾಂಗ್ರೆಸ್ 4, ಬಿಜೆಪಿ 2, ಜೆಡಿಎಸ್ 2 ಸೇರಿದಂತೆ ಪಕ್ಷೇತರರಾಗಿ 3 ಮಂದಿ ಗೆಲವು ಸಾಧಿಸಿದ್ದರು.ಕಡೆಗೆ ಕಾಂಗ್ರೆಸ್ ಪಕ್ಷೇತರರ ಬೆಂಬಲದಿಂದ 5 ವರ್ಷ ಆಡಳಿತ ನಡೆಸಿತು. ಆದರೆ ಈ ಬಾರಿ ಎಲ್ಲ ಪಕ್ಷಗಳೂ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಸ್ವತಂತ್ರವಾಗಿಯೇ ಅಧಿಕಾರ ಹಿಡಿಯಬೇಕೆಂದು ಪಣ ತೊಟ್ಟು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಸರತ್ತು ನಡೆಸುತ್ತಿವೆ.
ಆಡಳಿತ ಪಕ್ಷದಲ್ಲಿರುವ ಬಿಜೆಪಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಕಳೆದ ಸ್ಥಳೀಯ ಸಂಸ್ಥೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ನ ಮಾಜಿ ಶಾಸಕರಾಗಿಯೇ ತಮ್ಮ ಪ್ರಭಾವ ಬಳಸಿ 4 ಮಂದಿ ಸದಸ್ಯರನ್ನು ಗೆಲ್ಲಿಸುವುದರ ಮೂಲಕ ತಮ್ಮ ಸಂಘಟನೆ ಚಾತುರ್ಯ ಮೆರೆದಿದ್ದರು. ಈ ಬಾರಿ ರಾಜ್ಯದಲ್ಲಿ ಅವರದೇ ಬಿಜೆಪಿ ಸರ್ಕಾರ ಇದ್ದು, ಹಾಲಿ ಶಾಸಕರು ವಿಧಾನಸಭಾ ಚುನಾವಣೆಯ ಗುರಿ ಇಟ್ಟುಕೊಂಡು ಅಭ್ಯರ್ಥಿಗಳನ್ನು ಗೆಲ್ಲಿಸಿ ಗದ್ದುಗೆ ಹಿಡಿಯಬೇಕು ಎಂಬ ಉದ್ದೇಶದಿಂದ ಗೆಲ್ಲುವ ಕುದುರೆಗಳನ್ನು ಹುಡುಕುತ್ತಿದ್ದಾರೆ.
ಮಾಜಿ ಶಾಸಕ ಎಸ್.ಬಾಲರಾಜು ಕಳೆದ ಬಾರಿ ಶಾಸಕರಾಗಿ ತಮ್ಮದೆ ಜೆಡಿಎಸ್ ಸರ್ಕಾರ ಇದ್ದು ಕೂಡಾ 2 ಸ್ಥಾನ ಗೆಲ್ಲಿಸಲು ಹರಸಾಹಸ ಮಾಡಿದ್ದರು. ಈ ಬಾರಿ ಅಧಿಕಾರವಿಲ್ಲದಿದ್ದರೂ, ದೂರದೃಷ್ಠಿ ಇಟ್ಟುಕೊಂಡು 11 ವಾರ್ಡ್ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಿಸಲೇಬೇಕು ಎಂದು ಹಗಲು ರಾತ್ರಿ ತಮ್ಮ ಕಾರ್ಯಕರ್ತರೊಂದಿಗೆ ಸಮಾಲೋಚನೆಯಲ್ಲಿ ತೊಡಗಿದ್ದಾರೆ.
ಇನ್ನು ಕಾಂಗ್ರೆಸ್ನಲ್ಲಿ ಜನಪ್ರತಿನಿಧಿಗಳಿಗೆ ಕೊರತೆ ಇಲ್ಲ. ಸಂಸದ ಧ್ರುವನಾರಾಯಣ. ಶಾಸಕ ಸಿ.ಪುಟ್ಟರಂಗಶೆಟ್ಟಿ, ಮಾಜಿ ಶಾಸಕ ಎಸ್.ಜಯಣ್ಣ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಹೋರಾಟ ಮಾಡುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ನಿಂದ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಹೊಸ ಮುಖಗಳಿಗೆ ಮಣೆ ಹಾಕಲು ಹೊರಟಿದ್ದಾರೆ.
ಒಟ್ಟಿನಲ್ಲಿ ತಾಲೂಕಿನಲ್ಲಿ ರಾಜಕೀಯ ಚಟುವಟಿಕಗಳು ವೇಗ ಪಡೆದಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

